
ದಾವಣಗೆರೆ : ಸಿಎಂ ಸ್ಥಾನದ ಕುರಿತಾಗಿ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಯಾಗುತ್ತಿದ್ದು, ಇತ್ತೀಚಿಗೆ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದು ತೀವ್ರ ಕುತೂಹಲ ಕೆರಳಿಸಿತ್ತು.
ಬಳಿಕ ಇಂದು ಸಚಿವ ಜಮೀರ್ ಅಹ್ಮದ್ ಖಾನ್ ದಲಿತರಿಗೆ ಮುಸ್ಲಿಮರಿಗೆ ಒಕ್ಕಲಿಗರಿಗೆ ಲಿಂಗಾಯತರಿಗೆ ಎಲ್ಲರಿಗೂ ಸಿಎಂ ಆಗುವ ಆಸೆ ಇದೆ ಎಂದು ಹೇಳಿದರು.
ದಾವಣಗೆರೆಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ದಲಿತರು, ಮುಸ್ಲಿಂ, ಒಕ್ಕಲಿಗರು ಸೇರಿ ಎಲ್ಲರಿಗೂ ಸಿಎಂ ಆಗುವ ಆಸೆ ಇದೆ. ಆದರೆ ಮುಂದಿನ 5 ವರ್ಷದ ಅವಧಿಯಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಸಿಎಂ ಹುದ್ದೆಯಿಂದ ಟಗರನ್ನು ಅಲ್ಲಾಡಿಸಲು ಯಾರಿಂದಲೂ ಸಾಧ್ಯವೇ ಇಲ್ಲ ಎಂದು ಸಚಿವ ಜಮೀರ್ ಅಹ್ಮದ್ ಹೇಳಿಕೆ ನೀಡಿದರು. ಸಿಎಂ ಕುರ್ಚಿಯಲ್ಲಿ ಟಗರು ಗಟ್ಟಿಯಾಗಿ ಕುಳಿತದೆ. ಸಿಎಂ ಕುರ್ಚಿಯಲ್ಲಿರುವ ಟಗರನ್ನು ಯಾರಿಂದಲೂ ಸಾಧ್ಯವಿಲ್ಲ ಎಂದು ದಾವಣಗೆರೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದರು.