
ಬೆಳಗಾವಿ : ”ನಾನು ರಮೇಶ್ ಜಾರಕಿಹೊಳಿ ಅವರನ್ನು ಹುಡುಕುತ್ತಿದ್ದೇನೆ ಆದರೆ ಅವರು ಸಿಗುತ್ತಿಲ್ಲ” ಎಂದು ಬೆಳಗಾವಿಯಲ್ಲಿ ಬಿಜೆಪಿ(BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾರ್ಮಿಕ ಹೇಳಿಕೆ ನೀಡಿದ್ದಾರೆ.
”ಸತೀಶ್ ಜಾರಕಿಹೊಳಿ (ಕಾಂಗ್ರೆಸ್ ನಾಯಕ, ಸಚಿವ) ಅವರು ಸಿಕ್ಕರು.ಭೇಟಿಯಾದೆ.
ನಮ್ಮ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆ ಮಾಡಿದೆ” ಎಂದು ಸ್ವಪಕ್ಷೀಯ ತಮ್ಮ ವಿರುದ್ಧ ಬಂಡಾಯವೆದ್ದಿರುವ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಟಾಂಗ್ ನೀಡಿದರು.
”ಪಕ್ಷದ ವರಿಷ್ಠರು ನನಗೆ ಅವಕಾಶ ಕೊಟ್ಟಿದ್ದಾರೆ. ಆದರೆ ರಮೇಶ ಜಾರಕಿಹೊಳಿ ಸೇರಿದಂತೆ ಕೆಲವರಿಗೆ ನನ್ನನ್ನು ಒಪ್ಪಿಕೊಳ್ಳಲು ಸಮಯ ಬೇಕಾಗುತ್ತದೆ. ಕೆಲವರು ಬಹಳ ಬೇಗ ಒಪ್ಪಿಕೊಳ್ಳುತ್ತಾರೆ ಕೆಲವರಿಗೆ ಇನ್ನೂ ಸಮಯ ಬೇಕಾಗಿದೆ” ಎಂದು ಟಾಂಗ್ ನೀಡಿದರು.