
ಬೆಳಗಾವಿ ಅಕ್ಟೋಬರ್ 13: ಮುಡಾ ಹಗರಣದ ತನಿಖೆ ಮುಂದುವರೆದಿದ್ದು ಕೈ ಪಾಳಯದಲ್ಲಿ ಸಿಎಂ ಖುರ್ಚಿ ಬಡಿದಾಟ ಜೋರಾಗಿದೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಬೆಳಗಾವಿಯ ಸವದತ್ತಿ ಯಲ್ಲಮ್ಮನ ಮೊರೆ ಹೋಗಲು ನಿರ್ಧರಿಸಿದ್ದಾರೆ. ಬೆಳಗಾವಿಯಲ್ಲಿರುವ ಶಕ್ತಿ ದೇವತೆ ಸವದತ್ತಿ ಯಲ್ಲಮ್ಮನ ದರ್ಶನವನ್ನು ಇಂದು ಸಿಎಂ ಸಿದ್ದರಾಮಯ್ಯ ಪಡೆಯಲಿದ್ದಾರೆ.
ವಿವಿಧ ಕಾಮಗಾರಿಗಳ ಲೋಕಾರ್ಪಣೆ ಕಾರ್ಯಕ್ರಮಗಳು ಜರುಗಲಿದ್ದು, ಇದಕ್ಕಾಗಿ ಇಂದು ಮಧ್ಯಾಹ್ನ 1.30ಕ್ಕೆ ಸಿಎಂ ಸವದತ್ತಿಗೆ ಪ್ರಯಾಣ ಮಾಡಲಿದ್ದಾರೆ. ಇದೇ ವೇಳೆ ಮುಡಾ ಸಂಕಷ್ಟದಿಂದ ಪಾರಾಗಲು ಶಕ್ತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆಂದು ತಿಳಿದು ಬಂದಿದೆ. ದಸರಾ ಹಬ್ಬದ ಪ್ರಯುಕ್ತ ಮೈಸೂರಿಗೆ ತೆರಳಿದ್ದ ಸಿಎಂ ಅಲ್ಲಿಂದ ವಿಮಾನ ಮೂಲಕ ಹುಬ್ಬಳ್ಳಿಗೆ ತೆರಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಸವದತ್ತಿಗೆ ಭೇಟಿ ನೀಡಲಿದ್ದಾರೆ.