
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪತ್ನಿ ಮೈತ್ರಾದೇವಿ ಸಾವಿನ ಪ್ರಕರಣದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪಾತ್ರವಿದೆ ಎಂದು ಗಂಭೀರ ಆರೋಪ ಮಾಡಿರುವ ಬೈರತಿ ಸುರೇಶ್, ಈ ಬಗ್ಗೆ ಕೂಲಂಕಷ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಶೋಭಾ ಕರಂದ್ಲಾಜೆ ಅವರು ಗಾಳಿಯಲ್ಲಿ ಗುಂಡು ಹಾರಿಸುವುದನ್ನು ಬಿಡಬೇಕು.
ಹಾಗಾದರೆ, ಯಡಿಯೂರಪ್ಪ ಪತ್ನಿ ಮೈತ್ರಾದೇವಿ ಸಾವು ಹೇಗಾಯಿತು ಅಂತ ನಾನೂ ಕೇಳುತ್ತೇನೆ. ಆ ಪ್ರಕರಣದಲ್ಲಿ ಶೋಭಾ ಕರಂದ್ಲಾಜೆ ಪಾತ್ರವಿದೆ ಅಂತ ನಾನೂ ಆರೋಪ ಮಾಡುತ್ತೇನೆ. ಅದನ್ನು ಅವರು ಒಪ್ಪಿಕೊಳ್ಳುತ್ತಾರಾ? ಅದರ ಬಗ್ಗೆ ಕೂಲಂಕಷ ತನಿಖೆ ಆಗಲಿ ಎಂದು ಆಗ್ರಹಿಸಿದರು.