ದರ್ಶನ್‌ಗೆ ಪಾರ್ಶ್ವವಾಯು ಆಗುವ ಸಾಧ್ಯತೆಯಿದೆ

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ನಾಳೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ. ಇದೇ ವೇಳೆ ನಟ ದರ್ಶನ್ ಅವರ ಬೆನ್ನು ನೋವಿನ ವರದಿಯನ್ನು ಕೋರ್ಟಿಗೆ ಸಲ್ಲಿಸಲಾಗಿದೆ.
ದರ್ಶನ್ ಅವರ ಬೆನ್ನು ನೋವಿನ ಸಮಸ್ಯೆಗೆ ಸಂಬಂಧಿಸಿದಂತೆ ವೈದ್ಯಕೀಯ ವರದಿಯಲ್ಲಿ ಸ್ಪೋಟಕ ವಿಷಯ ಬಹಿರಂಗವಾಗಿದೆ. ದರ್ಶನ್ ಅವರ ಬೆನ್ನು ಮೂಳೆಯ L5 ಹಾಗೂ S1 ನಲ್ಲಿ ವಿಪರೀತ ನೋವು ಕಾಣಿಸಿಕೊಂಡಿದ್ದು, ಅಲ್ಲದೆ ಬೆನ್ನಿನಲ್ಲಿ ಊತ ಸಹ ಕಂಡುಬಂದಿದೆ. ಇದೆ ರೀತಿ ಮುಂದುವರೆದರೆ ನಟ ದರ್ಶನ್ ಅವರಿಗೆ ಪ್ಯಾರಲಿಸಿಸ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇಂದು ನಟ ದರ್ಶನ್ ಅವರ ಆರೋಗ್ಯದ ಕುರಿತು ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ಬಳಿಕ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು, ನ್ಯೂರೋ ಸರ್ಜನ್ ಮೂರು ಅಂಶ ಹೇಳಿದ್ದಾರೆ. ನಂಬ್ನೆಸ್ ಇದೆ, ರಕ್ತಪರಿಚಲನೆ ಆಗುತ್ತಿಲ್ಲ. ಇದರಿಂದ ಕಿಡ್ನಿಗೆ ಸಮಸ್ಯೆ ಆಗಬಹುದು. ಡಿಸ್ಕ್ ಸಮಸ್ಯೆ ಇದೆ. ತಕ್ಷಣ ಸರ್ಜರಿಗೆ ಸೂಚಿಸಿದ್ದಾರೆ. ಇಲ್ಲವಾದರೆ ಪ್ಯಾರಾಲಿಸಿಸ್ ಆಗಬಹುದು ಎಂದು ತಿಳಿಸಿದ್ದಾರೆ.