Uncategorized
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಐವರು ಬಾಣಂತಿಯರು ಸಾವು
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಐವರು ಬಾಣಂತಿಯರು ಸಾವು

ಬಳ್ಳಾರಿ, ನವೆಂಬರ್ 28: ಬಳ್ಳಾರಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಒಟ್ಟು ಐವರು ಬಾಣಂತಿಯರು ಮೃತಪಟ್ಟ ಸಂಬಂಧ ಇದೀಗ ಜಿಲ್ಲೆಯಲ್ಲಿ ಆಡಳಿತದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಣಂತಿಯರು ಬಲಿಯಾದರೇ ಎಂಬ ಅನುಮಾನವೂ ವ್ಯಕ್ತವಾಗಿದೆ. ಮೃತರ ಪೈಕಿ ನಾಲ್ವರು ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸಿಜೇರಿಯನ್ ಮಾಡಿಸಿಕೊಂಡಿದ್ದರು.
ಏತನ್ಮಧ್ಯೆ, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಬಾಣಂತಿಯರ ಸರಣಿ ಸಾವಾಗುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ನಾಪತ್ತೆಯಾಗಿದ್ದಾರೆ. ವದ್ಯರು, ಬಾಣಂತಿಯರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆಂದು ಕೈ ತೊಳೆದುಕೊಳ್ಳುತ್ತಿದ್ದಾರೆ. ಇಷ್ಟೆಲ್ಲ ಅದರೂ ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಜಿಲ್ಲೆಯ ಜನಪ್ರತಿನಿಧಿಗಳು ಎಚ್ಚರಿಸುತ್ತಿಲ್ಲ ಎಂಬ ಆಕ್ಷೇಪ ಕೇಳಿಬಂದಿದೆ.