
ವಿಧಾನ ಸೌಧದ ಕಚೇರಿಯಲ್ಲಿ ಪ್ರತಿ ವರ್ಷದಂತೆ ವಿಕಲ ಚೇತನರ ಸೇವಾ ಕ್ಷೇತ್ರದಲ್ಲಿ ಗಣನೀಯ ಸೇವೆಗೈದ ಸಾಧಕರಿಗೆ ಹಾಗೂ ಸಂಸ್ಥೆಗಳಿಗೆ ರಾಜ್ಯ ಮಟ್ಟದ 2024ನೇ ಸಾಲಿನ ವಿಕಲಚೇತನರ ಪ್ರಶಸ್ತಿ ನೀಡುವ ಕುರಿತು ವಿಧಾನ ಸೌಧದ ಕಚೇರಿಯಲ್ಲಿ ಪ್ರಶಸ್ತಿ ಆಯ್ಕೆ ಸಮಿತಿ ಸಭೆ ನಡೆಸಲಾಯಿತು.
ಸಭೆಯಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕ ಟಿ. ರಾಘವೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕ ಸಿದ್ದೇಶ್ವರ್, ಅಂಗ ವಿಕಲರ ವ್ಯಕ್ತಿಗಳ ಅಧಿ ನಿಯಮದ ಆಯುಕ್ತರಾದ ದಾಸ್ ಸೂರ್ಯವಂಶಿ, ಆಪ್ತ ಕಾರ್ಯದರ್ಶಿ ಡಾ. ಟಿ.ಎಚ್. ವಿಶ್ವನಾಥ್, ವಿಶೇಷ ಕರ್ತವ್ಯಾಧಿಕಾರಿ ಬಿ. ಎಚ್. ನಿಶ್ಚಲ್ ಸೇರಿದಂತೆ ಇಲಾಖೆ ಹಿರಿಯ ಅಧಿಕಾರಿಗಳು, ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.