ಚಿಕ್ಕೋಡಿ
ಬೋರಗಾಂವ ಪಟ್ಟಣಕ್ಕೆ 24 ಗಂಟೆ ನೀರು ಸರಬರಾಜು ಯೋಜನೆಯ ಕಾಮಗಾರಿಯನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಉದ್ಘಾಟಿಸಿದರು.

ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಬೋರಗಾಂವ ಪಟ್ಟಣದಲ್ಲಿ ಇಂದು ಕರ್ನಾಟಕ ಸರ್ಕಾರ ನೀರು ಸರಬರಾಜು ಇಲಾಖೆಯಿಂದ ಅಮೃತ 2.0 ಯೋಜನೆಯಡಿಯಲ್ಲಿ ಮಂಜೂರಾದ ಅಂದಾಜು 18 ಕೋಟಿ 98 ಲಕ್ಷ ರೂ. ವೆಚ್ಚದ ಬೋರಗಾಂವ ಪಟ್ಟಣಕ್ಕೆ 24 ಗಂಟೆ ನೀರು ಸರಬರಾಜು ಯೋಜನೆಯ ಕಾಮಗಾರಿಯನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಸ್.ಡಿ. ತೋಡಕರ್, ಗ್ರಾಮ ಪಂಚಾಯತ್ ಅಧ್ಯಕ್ಷ ಪಿಂಟು ಕಾಂಬಳೆ, ಉಪಾಧ್ಯಕ್ಷೆ ಶ್ರೀಮತಿ ಭಾರತಿ ವಸವಾಡೆ, ಪಟ್ಟಣ ಪಂಚಾಯತ್ ಸದಸ್ಯರು, ವಿವಿಧ ಸಂಸ್ಥೆಗಳ ಪದಾಧಿಕಾರಿಗಳು, ಸರಕಾರಿ ಅಧಿಕಾರಿಗಳು, ಇತರೆ ಗಣ್ಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು.