Uncategorizedರಾಜಕೀಯರಾಜ್ಯ

ಮಾಧ್ಯಮ ಪ್ರತಿನಿಧಿಗಳ ಬಹುದಿನಗಳ ಆಶಯದಂತೆ ಬೆಳಗಾವಿಯಲ್ಲಿ ಸುಸಜ್ಜಿತ ಪತ್ರಿಕಾ ಭವನ ನಿರ್ಮಾಣ‌ ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ

ಬೆಳಗಾವಿ, ಡಿ.13 : ಮಾಧ್ಯಮ ಪ್ರತಿನಿಧಿಗಳ ಬಹುದಿನಗಳ ಆಶಯದಂತೆ ಬೆಳಗಾವಿಯಲ್ಲಿ ಸುಸಜ್ಜಿತ ಪತ್ರಿಕಾ ಭವನ ನಿರ್ಮಾಣ‌ ಮಾಡಲಾಗುವುದು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು.

ಇಲ್ಲಿನ ವಿಶ್ವೇಶ್ವರಯ್ಯ ನಗರದಲ್ಲಿ ಶುಕ್ರವಾರ(ಡಿ.12) ಪತ್ರಿಕಾ ಭವನ‌ ಹಾಗೂ ತೋಟಗಾರಿಕೆ ಇಲಾಖೆ‌ ಕಚೇರಿ ಕಟ್ಟಡಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯ ನಿವೇಶನವನ್ನು ಒದಗಿಸುವ ಮೂಲಕ ಅನೇಕ ದಿನಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಅದೇ ರೀತಿ ಅಗತ್ಯ ಅನುದಾನ ಒದಗಿಸುವ ಮೂಲಕ ಸುಸಜ್ಜಿತ ಪತ್ರಿಕಾ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.

ಇದೇ ಸ್ಥಳದಲ್ಲಿ ತೋಟಗಾರಿಕೆ ಇಲಾಖೆಯ ಕಟ್ಟಡ‌ ನಿರ್ಮಾಣ‌ ಮಾಡುವದರ ಮೂಲಕ‌ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲಾಗುವದು. ಇಂತಹ ಉತ್ತಮ ಕಟ್ಟಡಗಳನ್ನು ನಿರ್ಮಿಸುವುದರಿಂದ ಎರಡನೇ ರಾಜಧಾನಿ ಬೆಳಗಾವಿಯನ್ನು ಅಭಿವೃದ್ಧಿ‌ಪಡಿಸಲು ಅನುಕೂಲವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಹೇಳಿದರು.

ತೋಟಗಾರಿಕೆ ಇಲಾಖೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಅವರು ಮಾತನಾಡಿ, ಬೆಳಗಾವಿಯಲ್ಲಿ ಸಾರ್ವಜನಿಕರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಉತ್ತಮ‌‌ ಕಟ್ಟಡಗಳನ್ನು ನಿರ್ಮಾಣ ಮಾಡುತ್ತಿರುವುದು ಸಂತಸದ ಸಂಗತಿಯಾಗಿದೆ. ಇದರಿಂದ ಬೆಳಗಾವಿ ಅಭಿವೃದ್ಧಿ ಪಥದತ್ತ ಸಾಗಲಿದೆ ಎಂದು ಹೇಳಿದರು

Related Articles

Leave a Reply

Your email address will not be published. Required fields are marked *

Back to top button