ರಾಜ್ಯ

ಸಿ.ಟಿ ರವಿ ಬಂಧನ ವಿರೋಧಿಸಿ ಬಿಜೆಪಿ ಪಕ್ಷ ಪ್ರತಿಭಟನೆ ಮಾಡುವ ಮೂಲಕ ಹೆಣ್ಣುಮಕ್ಕಳಿಗೆ ಅವಹೇಳನಕಾರಿಯಾಗಿ ಮಾತನಾಡುವುದನ್ನು ಬೆಂಬಲಿಸುತ್ತಿದ್ದಾರೆ.

ಸಿ.ಟಿ ರವಿ ಬಂಧನ ವಿರೋಧಿಸಿ ಬಿಜೆಪಿ ಪಕ್ಷ ಪ್ರತಿಭಟನೆ ಮಾಡುವ ಮೂಲಕ ಹೆಣ್ಣುಮಕ್ಕಳಿಗೆ ಅವಹೇಳನಕಾರಿಯಾಗಿ ಮಾತನಾಡುವುದನ್ನು ಬೆಂಬಲಿಸುತ್ತಿದ್ದಾರೆ.

ಸಿ.ಟಿ.ರವಿಯವರು ಕೀಳುಭಾಷೆ ಬಳಸಿದ್ದು ಸುಳ್ಳಾದರೆ ಅವರ ಬಂಧನವೇಕಾಯಿತು? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡಲು ಸಾಧ್ಯವಿಲ್ಲ.

ಸಿ.ಟಿ. ರವಿಯವರು ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ. ಆದರೆ ಇದೊಂದು ಗಂಭೀರ ಸ್ವರೂಪದ ಅಪರಾಧ.

ಸಿ.ಟಿ.ರವಿಯವರು ತಾವು ‘ಪ್ರಸ್ಟ್ರೇಷನ್’ ಪದ ಬಳಸಿರುವುದಾಗಿ ತಿಳಿಸಿದ್ದಾರೆ. ಆದರೆ ಅವಾಚ್ಯ ಪದ ಬಳಸಿರುವುದು ನಿಜವೆಂದು ಸಚಿವರು ಹೇಳಿದ್ದಾರೆ. ಕೀಳು ಪದಬಳಕೆಯನ್ನು ಕೇಳಿರುವುದಾಗಿ ಅಲ್ಲಿಯೇ ಇದ್ದ ಇತರ ಸದಸ್ಯರೂ ಹೇಳಿದ್ದಾರೆ. ಸಭಾಪತಿಯವರು ಪೀಠದಿಂದ ಹೊರನಡೆದ ನಂತರ ನಡೆದಿರುವ ಘಟನೆ ಬಗ್ಗೆ ಆಡಿಯೋ ಮತ್ತು ವಿಡಿಯೋ ಇದೆ ಎಂದೂ ಹಲವರು ಹೇಳುತ್ತಿದ್ದು, ಪದಬಳಕೆಯಾಗಿರುವುದು ಸತ್ಯ.

ಸಿ.ಟಿ ರವಿಯವರು ಎಸಗಿರುವ ಅಪರಾಧ ಕೃತ್ಯಕ್ಕೆ ಅನುಗುಣವಾಗಿ ಕಾನೂನಿನ ಕ್ರಮ ಜರುಗಿಸಬೇಕಾಗುತ್ತದೆ. ಬೆಳಗಾವಿಯಲ್ಲಿ ಜನರ ಆಕ್ರೋಶದಿಂದ ಸಿ.ಟಿ.ರವಿಯವರನ್ನು ರಕ್ಷಿಸಲು ಖಾನಾಪುರಕ್ಕೆ ಅವರನ್ನು ಕರೆತರಲಾಗಿತ್ತು.

Related Articles

Leave a Reply

Your email address will not be published. Required fields are marked *

Back to top button