Uncategorized

ಶತಮಾನೋತ್ಸವದ ಕಾಂಗ್ರೆಸ್ ಅಧಿವೇಶನ, ಸಕಲ ಸಿದ್ಧತೆ: ಸಿ.ಎಂ

ಬೆಳಗಾವಿ: 1924 ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಪೂರ್ವಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ್ದೇನೆ. ಗಾಂಧೀಜಿಯವರ ವಿಚಾರಧಾರೆಯನ್ನು ಪ್ರಚುರಪಡಿಸಲು ವರ್ಷಪೂರ್ತಿ ರಾಜ್ಯದೆಲ್ಲೆಡೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ಪೂರೈಸಿದ್ದು, ಆ ಪ್ರಯುಕ್ತ ಶತಮಾನೋತ್ಸವದ ಆಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಡಿಸೆಂಬರ್ 26 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ, ಸುವರ್ಣಸೌಧದ ಪಕ್ಕದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣದ ಕಾರ್ಯಕ್ರಮವಿದ್ದು, 27ರಂದು ಸಾರ್ವಜನಿಕ ಸಭೆ ಏರ್ಪಡಿಸಲಾಗಿದೆ.

ಬದಲಾವಣೆ ನಿರಂತರವಾದ ಪ್ರಕ್ರಿಯೆ. ನೂರು ವರ್ಷಗಳ ಹಿಂದಿದ್ದ ಪರಿಸ್ಥಿತಿ ಈಗಿಲ್ಲ. ರಾಜಕೀಯ ಬದಲಾವಣೆ ಹಾಗೂ ಬೆಳವಣಿಗೆಗಳು ಆಗುತ್ತಿರುತ್ತವೆ.

Related Articles

Leave a Reply

Your email address will not be published. Required fields are marked *

Back to top button