ಬೆಳಗಾವಿ
ಸುವರ್ಣ ವಿಧಾನ ಸೌಧದ ಆವರಣದಲ್ಲಿ ನಿರ್ಮಿಸಲಾದ “ವಿಜ್ಞಾನ ವನವನ್ನು” ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ.

ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಬೆಳಗಾವಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ 15ನೇ ಹಣಕಾಸು ಯೋಜನೆಯಡಿಯಲ್ಲಿ ಬೆಳಗಾವಿಯ ಸುವರ್ಣ ವಿಧಾನ ಸೌಧದ ಆವರಣದಲ್ಲಿ ನಿರ್ಮಿಸಲಾಗಿರುವ ವಿಜ್ಞಾನ ವನವನ್ನು (Science Park) ಇಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸಿದರು.
ಇದೇ ವೇಳೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಜೊತೆ ಸೇರಿ ನರೇಗಾ ಕಾರ್ಮಿಕರ ಕುಶಲೋಪರಿ ವಿಚಾರಿಸಿ, ಫೋಟೋ ತೆಗೆದುಕೊಂಡು ಖುಷಿ ಹಂಚಿಕೊಳ್ಳಲಾಯಿತು.