
ಶೇ.60% ಸಚಿವ ಕುಮಾರಸ್ವಾಮಿಗಳ ಆರೋಪ
ಆಧಾರವಿಲ್ಲದ ಆರೋಪ ಮಾಡುವುದನ್ನು ಬಿಟ್ಟು…
ರಾಜ್ಯದ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡಿ…
ಗೃಹ ಸಚಿವ ಜಿ.ಪರಮೇಶ್ವರ ಹೇಳಿಕೆ
ಕೇಂದ್ರದ ಬೃಹತ್ ಕೈಗಾರಿಕೆಗಳ ಸಚಿವ ಕುಮಾರಸ್ವಾಮಿಗಳು ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡುವುದನ್ನು ಬಿಟ್ಟು ಆಧಾರವಿಲ್ಲದ ಆರೋಪಗಳನ್ನು ಮಾಡುವುದು ಸರಿಯಲ್ಲ. ಅವರ ಬಳಿ ದಾಖಲೆಗಳಿದ್ದರೇ ನಮಗೆ ನೀಡಲಿ, ತನಿಖೆ ನಡೆಸಲು ನೆರವಾಗುತ್ತದೆಂದು ಗೃಹ ಸಚಿವ ಜಿ. ಪರಮೇಶ್ವರ ತಿರುಗೇಟು ನೀಡಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕೇಂದ್ರ ಸಚಿವ ಕುಮಾರಸ್ವಾಮಿಯವರ ಶೇ. 60 ರಷ್ಟು ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ನೀಡಿ, ಪರಿಶೀಲಿಸಿ ಕ್ರಮ ಕೈಗೊಳ್ಳೋಣ, ಸುಮ್ಮನೇ ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ ಎಂದರು. ಇನ್ನು ಭದ್ರಾವತಿ ಸ್ಟೀಲ್ಸ್ ಸೊರಗುತ್ತಿದ್ದು, ಕಾರ್ಖಾನೆ ಮುಚ್ಚುವ ಹಂತದಲ್ಲಿದೆ. ಅದಕ್ಕೆ ಉಳಿಸಿ, ಸಾವಿರಾರು ಜನರಿಗೆ ಕೆಲಸ ನೀಡುವ ಕೆಲಸ ಮಾಡಬೇಕು. ಕರ್ನಾಟಕದಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಒತ್ತು ಕೊಡುವ ಬಿಟ್ಟು, ಸುಮ್ಮನೆ ರಾಜಕೀಯ ಆರೋಪ ಮಾಡುವುದು ಸರಿಯಲ್ಲ ಎಂದರು.