ಬೆಳಗಾವಿ
ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಸಿ.ಎಂ.

ಬೆಳಗಾವಿ: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಇತ್ತೀಚೆಗೆ ನಡೆದ ಅಪಘಾತದಲ್ಲಿ ಗಾಯಗೊಂಡು ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡ ಘಟನೆ ನಡೆದಿತ್ತು. ಸಂಕ್ರಾಂತಿ ಹಬ್ಬದ ದಿನ ಬೆಳಗಿನ ಜಾವ ಐದು ಗಂಟೆ ಆಸುಪಾಸಿನ ಸಮಯದಲ್ಲಿ ಈ ಘಟನೆ ನಡೆದಿತ್ತು.. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮರಕ್ಕೆ ಕಾರು ಗುದ್ದಿ ಈ ಅಪಘಾತ ಸಂಭವಿಸಿತ್ತು. ಹಾಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಸಚಿವರಾದ ಜಿ.ಪರಮೇಶ್ವರ, ಎಚ್.ಸಿ.ಮಹದೇವಪ್ಪ ಮತ್ತಿತರರು ಉಪಸ್ಥಿತರಿದ್ದರು.