Uncategorized

ಸಂತ್ರಸ್ತ ಕುಟುಂಬಕ್ಕೆ ಪರಿಹಾರ ಮೊತ್ತ ಬಾಕಿ ;ಸಾರಿಗೆ ಇಲಾಖೆಯ ವಾಹನ ಜಪ್ತಿ.

ಗಂಗಾವತಿ: ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ಸಂತ್ರಸ್ತರ ಕುಟುಂಬಕ್ಕೆ ನೀಡಬೇಕಿದ್ದ ಪರಿಹಾರ ಮೊತ್ತವನ್ನು ಕಳೆದ ಐದು ವರ್ಷದಿಂದ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆ ಇಲ್ಲಿನ ನ್ಯಾಯಾಲಯದ ಸಿಬ್ಬಂದಿ, ಮಂಗಳವಾರ ಸಾರಿಗೆ ಇಲಾಖೆಯ ವಾಹನವನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಒಯ್ದಿದ್ದಾರೆ.

ನಗರದ ಕೇಂದ್ರ ಬಸ್ ನಿಲ್ದಾಣಕ್ಕೆ ವಕೀಲರಾದ ಗೋವಿಂದರಾಜು, ಕವಿತಾ ನೇತೃತ್ವದಲ್ಲಿ ಆಗಮಿಸಿದ ನ್ಯಾಯಾಲಯದ ಸಿಬ್ಬಂದಿಗಳಾದ ಯಸೂಫ್ ಮಿಯಾ, ರಮೇಶ, ಉಸ್ಮಾನ್, ಸೈಯದ್ಖಾದರ್, ವೆಂಕಟೇಶ ಇತರರು, ಕೊಪ್ಪಳ ಘಟಕಕ್ಕೆ ಸೇರಿದ ವಾಹನವನ್ನು ಜಪ್ತಿ ಮಾಡಿಕೊಂಡು ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ವಕೀಲ ಗೋವಿಂದು, ರಸ್ತೆ ಅಪಘಾತ ಪ್ರಕರಣದಲ್ಲಿ ಮೃತಪಟ್ಟ ಸುರೇಶ ಮತ್ತು ಗಾಯಾಳು ನರಸಪ್ಪ ಎಂಬ ಇಬ್ಬರಿಗೆ ನ್ಯಾಯಾಲಯವು 55 ಲಕ್ಷ ಮೊತ್ತದ ಪರಿಹಾರಕ್ಕೆ ಆದೇಶಿಸಿದೆ. ಇನ್ನುಳಿದ ಗಾಯಾಳುಗಳ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿ ಬಾಕಿ ಇದೆ. ಇದೀಗ 55 ಲಕ್ಷ ಮೊತ್ತದ ಪರಿಹಾರಕ್ಕೆ ಸಾರಿಗೆ ಇಲಾಖೆಯ ವಾಹನ ಜಪ್ತಿ ಮಾಡಲಾಗಿದೆ. ನಿಗದಿತ ಅವಧಿಯಲ್ಲಿ ಇಲಾಖೆಯ ಅಧಿಕಾರಿಗಳು ಪರಿಹಾರದ ಮೊತ್ತ ಪಾವತಿಸದೇ ಹೋದಲ್ಲಿ ಜಪ್ತಿ ಮಾಡಿದ ವಾಹನವನ್ನು ನ್ಯಾಯಾಲಯ ಹರಾಜು ಮಾಡಲಿದೆ. ನಿರೀಕ್ಷಿತ ಪರಿಹಾರದ ಮೊತ್ತ ಸಿಗದಿದ್ದಲ್ಲಿ ಬಾಕಿ ಮೊತ್ತಕ್ಕೆ ಮತ್ತೆ ವಾಹನಗಳನ್ನು ಜಪ್ತಿ ಮಾಡಲಾಗುವುದು ಎಂದರು.

Related Articles

Leave a Reply

Your email address will not be published. Required fields are marked *

Back to top button