ಬೆಳಗಾವಿ
ಒನ್ ನೇಷನ್-ಒನ್ ಎಲೆಕ್ಷನ್ ಜಾರಿಗೆ ಬಂದರೆ ಒಂದು ವರ್ಷ ಜಾಸ್ತಿ ಅವಕಾಶ ಸಿಗುತ್ತದೆ:

ಬೆಳಗಾವಿ : ಈ ಅವಧಿಯಲ್ಲಿ ನಮಗೆಲ್ಲ ಒಂದು ವರ್ಷ ಜಾಸ್ತಿ ಅವಕಾಶ ಸಿಗುತ್ತದೆ. ಒನ್ ನೇಶನ್-ಒನ್ ಎಲೆಕ್ಷನ್ ಜಾರಿಗೆ ಬಂದರೆ ಆರು ವರ್ಷ ನಾವು ಶಾಸಕರಾಗಿ ಇರಬಹುದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಅವಧಿ ಪೂರ್ವ ಚುನಾವಣೆ ಬರುತ್ತದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ, ಕೇಂದ್ರ ಸರ್ಕಾರ ಒನ್ ನೇಷನ್-ಒನ್ ಎಲೆಕ್ಷನ್ ಜಾರಿಗೆ ತಂದರೆ ಹೆಚ್ಚುವರಿಯಾಗಿ ಒಂದು ವರ್ಷ ಶಾಸಕರಾಗಿ ಇರಬಹುದು ಎಂದರು.
ನಾವು ಬೆಂಬಲ ಕೊಡಲಿ, ಬಿಡಲಿ. ಕೇಂದ್ರದಲ್ಲಿ ಅವರಿಗೆ ಬಹುಮತ ಇದೆ. ಹಾಗಾಗಿ, ಅವರು ಮಾಡುತ್ತಾರೆ. ಅದರಿಂದ ಆರು ವರ್ಷ ನಾವು ಶಾಸಕರಾಗಿ ಇರುತ್ತೇವೆ ಎಂದು ತಿರುಗೇಟು ಕೊಟ್ಟರು.