ಮೈಸೂರ್
ರಾತ್ರೋರಾತ್ರಿ ಪ್ರತಿಷ್ಠಾಪನೆ ಆಯಿತುನಾಡಪ್ರಭು ಕೆಂಪೇಗೌಡ ಪ್ರತಿಮೆ.

ಮೈಸೂರು: ಟಿ ನರಸೀಪುರ ರಸ್ತೆಯಲ್ಲಿ ರಾತ್ರೋರಾತ್ರಿ ನಾಡಪ್ರಭು ಕೆಂಪೇಗೌಡ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.
ಸ್ಥಳಕ್ಕೆ ಆಗಮಿಸಿ ಅದನ್ನು ತೆರವಿಗೊಳಿಸಬೇಕೆಂದು ಪೊಲೀಸರು ಹೇಳಿದಾಗ ಒಕ್ಕಲಿಗ ಸಂಘದ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಥಳೀಯರ ಪರವಾಗಿ ಮಾತಾಡಿದ ಒಕ್ಕಲಿಗ ಮುಖಂಡರೊಬ್ಬರು ಕಳೆದ ಮೂರು ವರ್ಷಗಳಿಂದ ಸ್ಥಳದಲ್ಲಿ ಕೆಂಪೇಗೌಡ ಪ್ರತಿಮೆ ಪ್ರತಿಷ್ಠಾಪಿಸುವುದಕ್ಕೆ ಪ್ರಯತ್ನಗಳು ನಡೆದಿದ್ದವು.
ಶಾಸಕರಾದ ಶ್ರೀವತ್ಸ ಮತ್ತು ಹರೀಶ್ ಸಮಯ ತೆಗೆದುಕೊಂಡಿದ್ದರೂ ಪ್ರತಿಮೆ ಪ್ರತಿಷ್ಠಾಪನೆಗೆ ಅನುಮತಿ ಪಡೆದುಕೊಳ್ಳಲಿಲ್ಲ. ಹಾಗಾಗಿ ಸ್ಥಳೀಯರೇ ನಿನ್ನೆ ರಾತ್ರಿ ಇಲ್ಲಿ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದಾರೆ ಎಂದು ಹೇಳುತ್ತಾರೆ.