ಬೆಳಗಾವಿ
ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ನೂತನ ಮೂರ್ತಿಯ ಪ್ರತಿಷ್ಟಾಪನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಲಕ್ಷ್ಮೀ ಹೆಬ್ಬಾಳ್ಕರ್.

ಬೆಳಗಾವಿ: ಗ್ರಾಮೀಣ ಕ್ಷೇತ್ರದ ತುರಮುರಿ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ನೂತನ ಮೂರ್ತಿಯ ಪ್ರತಿಷ್ಟಾಪನೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಲಕ್ಷ್ಮೀ ಹೆಬ್ಬಾಳ್ಕರ್.
ಶಿವಾಜಿ ಮಹಾರಾಜರ ಜಯಂತಿಯ ಪ್ರಯುಕ್ತವಾಗಿ ಮೂರ್ತಿಯನ್ನು ಅನಾವರಣಗೊಳಿಸಲಾಗಿದೆ. ಕ್ಷೇತ್ರದ ಎಲ್ಲ ಗ್ರಾಮಗಳ, ಸರ್ವ ಜನಾಂಗಗಳ ಹಿತ ದೃಷ್ಟಿಯಿಂದ ಎಲ್ಲ ಮಹನೀಯರ ಮೂರ್ತಿಗಳ ಪ್ರತಿಷ್ಟಾಪನೆಗೆ ಮಹತ್ವ ನೀಡಲಾಗುತ್ತಿದೆ. ಬರುವ ದಿನಗಳಲ್ಲಿ ಕ್ಷೇತ್ರದಲ್ಲಿ ಮತ್ತಷ್ಟು ಮಹನೀಯರ ಮೂರ್ತಿಗಳು ತಲೆ ಎತ್ತಲಿವೆ.
ಈ ಸಂದರ್ಭದಲ್ಲಿ ಯುವರಾಜಣ್ಣ ಕದಂ, ಜಯವಂತ ಬಾಳೇಕುಂದ್ರಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್, ಸಿದ್ದಪ್ಪ ಕಾಂಬಳೆ, ಅಶೋಕ ಚೌಗುಲೆ, ವೈಶಾಲಿ ಖಂಡೇಕರ್, ನಾಗರಾಜ ಜಾಧವ್, ಆರ್.ಎಂ.ಚೌಗುಲೆ, ರವಿ ಕೊಕಿತಕರ್, ಚಂದ್ರಕಾಂತ ಜಾಧವ್, ರಾಜು ಜಾಧವ್, ಎನ್.ಬಿ.ಖಂಡೇಕರ್, ಚಾಂಗದೇವ್ ಬೆಳಗಾಂವ್ಕರ್, ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.