ಕೃಷಿ ಭೂಮಿ ಕೈಗಾರಿಕೆಗೆ ಉದ್ದೇಶಕ್ಕೆ ಬಳಕೆ: ಯೋಜನೆ ಕೈ ಬಿಡಲು ರೈತರ ಪ್ರತಿಭಟನೆ.

ವಿಜಯಪುರ: ಜಿಲ್ಲೆಯ ತಿಡಗುಂದಿ ಸಮೀಪ 1203 ಎಕರೆ ರೈತರ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕಾಗಿ ಬಳಸುವುದನ್ನು ವಿರೋಧಿಸಿ, ಯೋಜನೆಯನ್ನು ಕೈಬೀಡಬೇಕೆಂದು ಆಗ್ರಹಿಸಿ ವಿಜಯಪುರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ರೈತರೊಂದಿಗೆ ಬೃಹತ್ ಪ್ರತಿಭಟನೆ ಮಾಡಿದರು.
ವಿಜಯಪುರ ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ಮಾಡಿದ ರೈತರು ಸರ್ಕಾರದ ವಿರುದ್ಧ ಹಾಗೂ ಕೈಗಾರಿಕಾ ಸಚಿವ ಎಂಬಿ ಪಾಟೀಲರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾದ್ಯಕ್ಷ ಸಂಗಮೇಶ ಸಗರ ಮಾತನಾಡಿ ಫಲವತ್ತಾದ ಭೂಮಿಯನ್ನು ಕೈಗಾರಿಗಾ ಉದ್ದೇಶಕ್ಕೆ ಬಳಸುವುದು ಸರಿಯಲ್ಲಿ ಜಿಲ್ಲೆಯಲ್ಲಿ ಸಾಕಷ್ಟು ಬಂಜರು ಭೂಮಿ ಇದೆ. ಅಲ್ಲಿ ಕೈಗಾರಿಗೆ ಸ್ಥಾಪನೆ ಮಾಡಿ ಫಲವತ್ತಾದ ಭೂಮಿಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡಲು ಬಿಡುವುದಿಲ್ಲ ಎಂದು ಆಗ್ರಿಸಿದ್ದಾರೆ. ಪ್ರಾಣ ಬಿಟ್ಟೇವು ಭೂಮಿ ಬಿಡಲ್ಲ ಎಂದು ಘೋಷಣೆ ಕೂಗಿದರು.