ಇದೇ ತಿಂಗಳು 27 ,28 ರಂದು ಸಿಪಿಎಡ್ ಮೈದಾನದಲ್ಲಿ ಬೃಹತ್ ಪ್ರತಿಭಟನೆ;ಸತೀಶ ಜಾರಕಿಹೊಳಿ

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಬೆಲೆ ಏರಿಕೆ ಒಂದೇ ಕೆಲಸವಾಗಿದೆ. ತಮ್ಮ ತಪ್ಪನ್ನು ಮರೆಮಾಚಲು ಬೆಲೆ ಏರಿಕೆ ಹಾಗೂ ಸಂವಿಧಾನದ ಮೇಲೆ ಅಪಾದನೆ ನಿರಂತರ ನಡೆಸುತ್ತಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರವನ್ನು ಎಚ್ಚರಿಸುವ ಉದ್ದೇಶದಿಂದ ಬೆಳಗಾವಿ, ಚಿಕ್ಕೋಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರತಿಭಟನೆಗೆ ಭಾಗವಹಿಸಲು ಏ. 27, 28 ರಂದು ಬೃಹತ್ ಪ್ರತಿಭಟನೆಯನ್ನು ಸಿಪಿಎಡ್ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಅವರು ಹೇಳಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾತನಾಡಿ, ಕೇಂದ್ರ ಸರ್ಕಾರ ವಿರುದ್ಧ ಬೆಲೆ ಏರಿಕೆ, ಸಂವಿಧಾನ ಬಚ್ಚಾವೋ ಆಂದೋಲನ ಕುರಿತು ಪ್ರತಿಭಟನೆ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ , ತೈಲ, ದಿನಸಿ, ಸಿಮೆಂಟ್, ಗೊಬ್ಬರ, ಔಷದಿ ಬೆಲೆ ಏರಿಕೆ ಸೇರಿದಂತೆ ಸಾಕಷ್ಟು ಬೆಲೆಗಳನ್ನು ಏರಿಕೆ ಮಾಡಿದೆ. ಈ ಬೆಲೆ ಏರಿಕೆ ಸಮಸ್ಯೆಗಳನ್ನು ನಿಗಿಸಲು ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜನ್ಮ ತಾಳಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರ ನೀತಿಯಿಂದ ಎಲ್ಲಾ ಬೆಲೆಗಳು ಏರಿಕೆ ಕಂಡಿವೆ. ಇದನ್ನು ಮರೆಮಾಚಲು ಬಿಜೆಪಿಯವರು ಜನಾಕ್ರೋಶ ಪ್ರತಿಭಟನೆ ಮಾಡುತ್ತಿದ್ದಾರೆ. ಒಂದು ಸುಳ್ಳನ್ನು ಸಾವಿರ ಬಾರಿ ಹೇಳಿ ಬಿಜೆಪಿ ಜನರ ದಿಕ್ಕನ್ನು ತಪ್ಪಿಸುತ್ತಿದ್ದಾರೆ. ಬಿಜೆಪಿಯ ಸುಳ್ಳಿನ ಸತ್ಯಾಂಶವನ್ನು ಜನರಿಗೆ ತಿಳಿಸಲು ಕೈ ಪಕ್ಷದಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ರಾಜು ಸೇಠ, ಮಾಜಿ ಸಚಿವ ಬಾಬಾಸಾಹೇಬ ಪಾಟೀಲ , ರಾಜ್ಯಸಭಾ ಸದಸ್ಯರಾದ ಜಿ ಸಿ ಚಂದ್ರಶೇಖರ, ಎಐಸಿಸಿ ಕಾರ್ಯದರ್ಶಿಗಳಾದ ಅಭಿಷೇಕ ದತ್ತಾ, ಪಳನಿಯಪ್ಪನ್ನ, ಅಧ್ಯಕ್ಷರಾದ ವಿನಯ ನಾವಲಗಟ್ಟಿ, ಸುನೀಲ ಹನ್ನಣ್ಣನವರ ಹಾಗೂ ಇತರರು ಇದ್ದರು.