
ಪಹಲ್ಗಾಂಮ್: ಉಗ್ರರ ದಾಳಿಯಲ್ಲಿ ಮೃತಪಟ್ಟಿರುವವರ ಗುರುತು ಪತ್ತೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಮೃ*ತರ ಸಂಬಂಧಿಕರಿಗೆ ನೆರವು ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಲಾಡ್ ಅವರು ಕಾಶ್ಮೀರದಲ್ಲಿ ತೊಂದರೆಗೊಳಗಾದ ಕನ್ನಡಿಗರ ರಕ್ಷಣೆಗೆ ಕಾಶ್ಮೀರಕ್ಕೆ ತೆರಳಿದ್ದಾರೆ.
ಮೃ*ತದೇಹಗಳನ್ನು ಇರಿಸಲಾಗಿರುವ ಪೆಟ್ಟಿಗೆಗಳ ಮೇಲೆ ದೂರವಾಣಿ ಕರೆಗಳನ್ನು ನಮೂದಿಸಲಾಗಿದ್ದು, ಸಂಬಂಧಿಕರಿಗೆ ಕರೆ ಮಾಡಿ ಸ್ವತಃ ಸಂತೋಷ್ ಲಾಡ್ ಅವರೇ ತಿಳಿಸುತ್ತಿದ್ದಾರೆ.
“ಮೃ*ತದೇಹಗಳನ್ನು ಕರ್ನಾಟಕಕ್ಕೆ ತರಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು. ತೊಂದರೆಗೊಳಗಾದವರಿಗೆ ಅಗತ್ಯ ನೆರವನ್ನು ಮಾಡಲಾಗುವುದು. ನಮ್ಮ ಸರ್ಕಾರ ಏಲ್ಲಾ ರೀತಿಯಲ್ಲಿ ಸಹಾಯ ಮಾಡಲಿದೆ” ಎಂದು ಲಾಡ್ ಅವರು ತಿಳಿಸಿದ್ದಾರೆ.
ಇಬ್ಬರ ಗುರುತು ಪತ್ತೆ: ಉಗ್ರರ ದಾಳಿಯಲ್ಲಿ ಮೃತಪಟ್ಟ ಶಿವಮೊಗ್ಗ ಮತ್ತು ರಾಣೇಬೆನ್ನೂರಿನ ಇಬ್ಬರು ಪ್ರವಾಸಿಗರ ಗುರುತು ಪತ್ತೆಯಾಗಿದ್ದು, ಇನ್ನೂ ಒಬ್ಬರ ಗುರುತು ಸಿಗಬೇಕಿದೆ.