
ಬೆಂಗಳೂರು: ತಮ್ಮ ವಿರುದ್ಧ ಅವಹೇಳನಕಾರಿ ಪದ ಬಳಸಿದ ಸಿಟಿ ರವಿ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಡಿಸೆಂಬರ್ 19, 2024 ರಂದು ಬೆಳಗಾವಿ ಜಿಲ್ಲೆಯ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಂತರ ರಾಜ್ಯ ಸರ್ಕಾರವು ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ(CID) ವರ್ಗಾಯಿಸಿತು.
ಸಿಟಿ ರವಿ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ಅವರು, ದೂರು ದಾಖಲಿಸುವ ಮೊದಲು, ವಿಧಾನಸಭೆಯ ಸ್ಪೀಕರ್ ಈ ವಿಷಯವನ್ನು ಕೈಗೆತ್ತಿಕೊಂಡು ವಿಚಾರಣೆ ಮುಕ್ತಾಯಗೊಳಿಸಿದರು ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ವಿರುದ್ಧ ಅವಹೇಳನಕಾರಿ ಪದ ಬಳಿಸಿ ನಿಂದಿಸಿದ ಆರೋಪದ ತಮ್ಮ ವಿರುದ್ಧ ದಾಖಲಿಸಿದ್ದ ಎಫ್ಐಆರ್ ರದ್ದು ಕೋರಿ ಬಿಜೆಪಿ ಎಂಎಲ್ ಸಿ ಸಿಟಿ ರವಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.