ಮೂಲಭೂತ ಸೌಕರ್ಯ ಒದಗಿಸಲು ಕ್ಯಾರೆ ಎನ್ನದ ಪಿಡಿಓ ;ಜಿಲ್ಲಾಡಳಿತ ಭವನದೆದುರು ಪ್ರತಿಭಟನೆ

ಬಾಗಲಕೋಟೆ: ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸ್ಪಂದಿಸದ ಪಿಡಿಓ ವಿರುದ್ಧ ಬಾಗಲಕೋಟೆ ಜಿಲ್ಲಾಡಳಿತ ಭವನ ಎದುರು ಜಮಖಂಡಿ ತಾಲ್ಲೂಕಿನ ಕೊಣ್ಣೂರ ಗ್ರಾಮದ ಮಡ್ಡಿ ವಸ್ತಿ ಜನರಿಂದ ಪ್ರತಿಭಟನೆಯನ್ನು ನಡೆಸಲಾಯಿತು.
ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಕೊಣ್ಣೂರ ಗ್ರಾಮದ ಮಡ್ಡಿ ವಸ್ತಿಯಲ್ಲಿ ಮೂಲಭೂತ ಸೌಕರ್ಯಗಳ ಸಮಸ್ಯೆಯಿದೆ. ಈ ಕುರಿತು ಗ್ರಾಮಸ್ಥರು ಹಲವಾರು ಬಾರಿ ಪಿಡಿಓ ಗಮನಕ್ಕೆ ತಂದಿದ್ದಾರೆ. ಆದರೇ, ಪಿಡಿಓ ಅವರಿಂದ ಸೂಕ್ತ ಸ್ಪಂದನೆ ದೊರೆತಿಲ್ಲ. ಆದ್ದರಿಂದ ಇಂದು ಬಾಗಲಕೋಟೆ ಜಿಲ್ಲಾಡಳಿತ ಭವನದ ಎದುರು ಮಡ್ಡಿ ವಸ್ತಿ ಗ್ರಾಮಸ್ಥರು ಪ್ರತಿಭಟನೆಯನ್ನು ನಡೆಸಿದರು.
ಗ್ರಾಮದ ಮಡ್ಡಿ ವಸ್ತಿಯಲ್ಲಿ 30 ವರ್ಷಗಳಿಂದ ವಾಸಿಸುವ ಹಲವಾರು ಕುಟುಂಬಗಳಿಗೆ ಮೂಲಭೂತ ಸಮಸ್ಯೆಗಳು ಎದುರಾಗಿವೆ. ಈ ಕುರಿತು ಪಿಡಿಓಗೆ ತಿಳಿಸಿದರೂ ಕ್ಯಾರೆ ಎನ್ನುತ್ತಿಲ್ಲ. ಗ್ರಾಮ ಪಂಚಾಯತಿ, ಜಿಲ್ಲಾ ಪಂಚಾಯತ್ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ಪಿಡಿಓ ವಿರುದ್ಧ ಕ್ರಮಕ್ಕೆ ಆಗ್ರಹಿಸಿ, ಎಡಿಸಿ ಸಿನ್ನಾಳಕರ್ ಅವರಿಗೆ ಮನವಿಯನ್ನು ಸಲ್ಲಿಸಿದ್ದಾರೆ.
ಪ್ರತಿಭಟನೆಯಲ್ಲಿ ಸುಮಾರು 300 ಕುಟುಂಬಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವು.