ಬಿಜಾಪುರರಾಜ್ಯ

ಬಾರ್ & ಲಾಡ್ಜ್ ನಲ್ಲಿ ವೈಶ್ಯಾವಾಟಿಕೆ; ಇಬ್ಬರು ಮಹಿಳೆಯರ ರಕ್ಷಣೆ

ವಿಜಯಪುರ; ಬಾರ್ ಅಂಡ್ ಲಾಡ್ಜ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಬೇಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದ್ದು, ಕೆಲವು ಶಂಕಿತರನ್ನು ವಶಕ್ಕೆ ಪಡೆದಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಸಾಂಗವಿ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಸಾಂಗವಿ ಬಾರ್ ಅಂಡ್ ಲಾಡ್ಜ್‌ನಲ್ಲಿ ಇಬ್ಬರು ಮಹಿಳೆಯರನ್ನು ಅಕ್ರಮವಾಗಿ ಇಟ್ಟುಕೊಂಡು ಹಾಡುಹಗಲೇ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇಲೆ ಮುದ್ದೇಬಿಹಾಳ ಶಹರ ಪೊಲೀಸರು ಯಶಸ್ವಿ ದಾಳಿ ನಡೆಸಿದ ಘಟನೆ ನಡೆದಿದೆ. ಸಿಪಿಐ ಮಹಮ್ಮದ್ ಫಸಿವುದ್ದೀನ್ ಮತ್ತು ಪಿಎಸ್‌ಐ ಸಂಜಯ ತಿಪ್ಪಾರೆಡ್ಡಿ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಬಾಗಲಕೋಟೆ ಮತ್ತು ಚಿಕ್ಕಮಗಳೂರು ಮೂಲದ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ.

ದಾಳಿಯ ಸಂದರ್ಭದಲ್ಲಿ ಕೆಲವು ಶಂಕಿತರನ್ನು ವಶಕ್ಕೆ ತೆಗೆದು ಕೊಳ್ಳಲಾಗಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ. ಪೊಲೀಸರು ಈ ದಂಧೆಯ ಹಿಂದಿನ ರೂವಾರಿಗಳನ್ನು ಪತ್ತೆಹಚ್ಚಲು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮುಂದಿನ ಕಾನೂನು ಕ್ರಮಕ್ಕಾಗಿ ಪರಿಶೀಲನೆ ಮುಂದುವರೆಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button