Uncategorized
ರೌಡಿಶೀಟರ್ ಮನೆಗಳ ಮೇಲೆ ಅಥಣಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ದಿಢೀರ್ ದಾಳಿ

ಅಥಣಿ: ರೌಡಿಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ
ಅಥಣಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ದಿಢೀರ್ ದಾಳಿ
ರೌಡಿಶೀಟರ್‌ಗಳ ಮನೆಗಳ ಮೇಲೆ ಖಾಕಿ ದಾಳಿ
ಸಾರ್ವಜನಿಕ ಶಾಂತಿ ಕಾಪಾಡಲು ಕಠಿಣ ಕ್ರಮ
ಅಪರಾಧ ಚಟುವಟಿಕೆಗಳಿಗೆ ಬ್ರೇಕ್ ಹಾಕಿದ ಪೊಲೀಸರು
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬುಧವಾರ ಮುಂಜಾನೆ ಡಿವೈಎಸ್ಪಿ ಅವರ ನೇತೃತ್ವದಲ್ಲಿ ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಲಾಯಿತು.
ಈ ವೇಳೆ ರೌಡಿಶೀಟರ್‌ಗಳ ಮನೆಗಳಿಗೆ ಭೇಟಿ ನೀಡಿ, ಅವರ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಿದ ಪೊಲೀಸರು, ಯಾವುದೇ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿಕೊಳ್ಳದಂತೆ ಎಚ್ಚರಿಕೆ ನೀಡಿದರು.
ಅಲ್ಲದೆ, ಅವರ ಪ್ರಸ್ತುತ ಚಟುವಟಿಕೆಗಳು ಹಾಗೂ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ ಯಾವುದೇ ಬೆಳವಣಿಗೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು.
ಪೊಲೀಸ್ ಇಲಾಖೆಯ ಈ ಕಾರ್ಯಾಚರಣೆ ಅಪರಾಧ ಚಟುವಟಿಕೆಗಳ ನಿಯಂತ್ರಣ ಹಾಗೂ ಸಾರ್ವಜನಿಕರಲ್ಲಿ ಭದ್ರತೆಯ ಭಾವನೆ ಮೂಡಿಸುವ ಉದ್ದೇಶದಿಂದ ಕೈಗೊಳ್ಳಲಾಗಿದೆ



