Uncategorized

ವಿಧಾನಸೌಧದಲ್ಲಿ ತಮ್ಮ ಗೆಲುವಿನ ಪ್ರಮಾಣಪತ್ರವನ್ನು ಸ್ವೀಕರಿಸಿದರು. ಮಲ್ಲಿಕಾರ್ಜುನ ಖರ್ಗೆ

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭಾ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು, ಇಂದು ವಿಧಾನಸೌಧದಲ್ಲಿ ತಮ್ಮ ಗೆಲುವಿನ ಪ್ರಮಾಣಪತ್ರವನ್ನು ಸ್ವೀಕರಿಸಿದರು.
ಚುನಾವಣಾ ಅಧಿಕಾರಿ ವಿಶಾಲಾ ಅವರು ಖರ್ಗೆಯವರಿಗೆ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮಾಧ್ಯಮದವರಿಗೆ ಹಾಗೂ ಸಾರ್ವಜನಿಕರಿಗೆ ಧನ್ಯವಾದಗಳನ್ನು ಅರ್ಪಿಸಿದರು. ನಮ್ಮ ಪಕ್ಷದ ಎಲ್ಲ ಕಾರ್ಯಕರ್ತರಲ್ಲೂ ಸಂತಸ ಮನೆ ಮಾಡಿದೆ.
ತಮ್ಮ ಜೀವನದಲ್ಲಿ ಸತತವಾಗಿ ಕಾಂಗ್ರೆಸ್ ಪಕ್ಷವು ಇಂದಿರಾಗಾಂಧಿಯಿಂದ ಸೋನಿಯಾಗಾಂಧಿ ವರೆಗೆ ಕೆಲಸ ಮಾಡಲು ಅವಕಾಶ ನೀಡಿದೆ. ಕಾಂಗ್ರೆಸ್ ಪಕ್ಷದ ತತ್ವಗಳ ಮೇಲೆ ಮುಂದುವರೆಯುತ್ತಿದ್ದು ಜನರ ಬೆಂಬಲಕ್ಕೆ ಮತ್ತು ಹೈಕಮಾಂಡ್’ಗೆ ಕೃತಜ್ಞತೆಗಳನ್ನು ಸಲ್ಲಿಸಿದರು

Related Articles

Leave a Reply

Your email address will not be published. Required fields are marked *

Back to top button