Uncategorized

ಬಾಗಲಕೋಟೆ ಜಿಲ್ಲೆಯಿಂದ ಒಂದು ಬಿಗ್ ಬ್ರೇಕಿಂಗ್ ಸುದ್ದಿ

ಬಾಗಲಕೋಟೆ ಜಿಲ್ಲೆಯಿಂದ ಒಂದು ಬಿಗ್ ಬ್ರೇಕಿಂಗ್ ಸುದ್ದಿ ವರದಿಯಾಗುತ್ತಿದೆ.
ಮುಧೋಳ ತಾಲೂಕಿನ ಮೆಟಗುಡ್ಡ ಗ್ರಾಮದ 75 ಎಕರೆ ವಿಸ್ತೀರ್ಣದ ಬೃಹತ್ ಕೆರೆ ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಸಂಪೂರ್ಣ ಒಣಗಿ ನಿಂತಿದೆ.
ಕೋಟಿ ಕೋಟಿ ಅನುದಾನ ಖರ್ಚಾದರೂ ಕೆರೆಗೆ ಹನಿ ನೀರು ಬಾರದೇ ಇರುವುದರಿಂದ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಟಗುಡ್ಡ ಗ್ರಾಮದಲ್ಲಿರುವ 75 ಎಕರೆ ವಿಸ್ತೀರ್ಣದ ಬೃಹತ್ ಕೆರೆ ಇಂದು ಇದ್ದೂ ಇಲ್ಲದಂತಾಗಿದ್ದು, ಹತ್ತಾರು ಹಳ್ಳಿಗಳ ಜೀವನಾಡಿ ಸಂಪೂರ್ಣವಾಗಿ ಒಣಗಿ ನಿಂತಿದೆ.
ಕೆರೆ ತುಂಬಿಸುವ ಸರ್ಕಾರದ ಯೋಜನೆಗೆ ಅವೈಜ್ಞಾನಿಕವಾಗಿ ಕಾಮಗಾರಿ ನಡೆಸಿರುವುದೇ ಇದಕ್ಕೆ ಕಾರಣವಾಗಿದ್ದು, ಕೋಟಿ ಕೋಟಿ ಅನುದಾನ ಖರ್ಚಾದರೂ ಕೆರೆಗೆ ಮಾತ್ರ ನೀರು ಬಂದಿಲ್ಲ.
ಆಶ್ಚರ್ಯದ ಸಂಗತಿಯೆಂದರೆ, ಹನಿ ನೀರೂ ಇಲ್ಲದ ಈ ಒಣ ಕೆರೆಯಲ್ಲಿ ಅಧಿಕಾರಿಗಳು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಅಳವಡಿಸಿದ್ದು, ಸಾರ್ವಜನಿಕರ ಹಣ ಅನವಶ್ಯಕ ಪೋಲಾಗಲು ದಾರಿಯಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆರೆಯಲ್ಲಿ ನೀರು ಇಲ್ಲದ ಕಾರಣ ಸುತ್ತಮುತ್ತಲಿನ ಪ್ರದೇಶದಲ್ಲಿ ಅಂತರ್ಜಲ ಮಟ್ಟ ಭೀಕರವಾಗಿ ಕುಸಿದಿದ್ದು, ರೈತರ ಜೀವನಾಡಿಯಾಗಿದ್ದ ಸುಮಾರು 1 ಸಾವಿರಕ್ಕೂ ಹೆಚ್ಚು ಬೋರ್‌ವೆಲ್‌ಗಳು ಸಂಪೂರ್ಣವಾಗಿ ಬತ್ತಿ ಹೋಗಿವೆ.
ಇದರಿಂದಾಗಿ ಬೆಳೆಗಳು ಕಣ್ಣೆದುರೇ ಒಣಗುತ್ತಿದ್ದು, ರೈತರು ಕೃಷಿ ಉಳಿಸಿಕೊಳ್ಳಲು ಬೇರೆ ಬೇರೆ ಗುಡ್ಡಗಾಡು ಪ್ರದೇಶಗಳಲ್ಲಿ ಬೋರ್ ಕೊರೆಸಿ ಕೋಟ್ಯಂತರ ರೂಪಾಯಿ ಸಾಲದ ಸುಳಿಗೆ ಸಿಲುಕುತ್ತಿದ್ದಾರೆ. ತಕ್ಷಣವೇ ಕೆರೆಯಲ್ಲಿರುವ ಹೂಳು ತೆಗೆದು, ಕಾಲುವೆ ಮೂಲಕ ಕೆರೆ ತುಂಬಿಸುವ ವೈಜ್ಞಾನಿಕ ಯೋಜನೆಯನ್ನು ಕೈಗೊಳ್ಳಬೇಕೆಂದು ಸಂಕಷ್ಟದಲ್ಲಿರುವ ಹತ್ತಾರು ಹಳ್ಳಿಗಳ ರೈತರು ಸರ್ಕಾರವನ್ನು ತೀವ್ರವಾಗಿ ಆಗ್ರಹಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button