Uncategorized

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ದೆಹಲಿ ಮೂಲದ ಮಹಿಳೆಯೊಬ್ಬರ ವಿರುದ್ಧ ಬೆಳಗಾವಿಯಲ್ಲಿ ದೂರು ದಾಖಲಾಗಿದೆ

ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ದೆಹಲಿ ಮೂಲದ ಮಹಿಳೆಯೊಬ್ಬರ ವಿರುದ್ಧ ಬೆಳಗಾವಿಯಲ್ಲಿ ದೂರು ದಾಖಲಾಗಿದೆ. ಪ್ರವಾದಿ ಮೊಹಮ್ಮದ್ ಹಾಗೂ ಹಜರತ್ ಆಯಿಷಾ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ನಾಜಿಯಾ ಇಲಾಹಿ ಖಾನ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮುಸ್ಲಿಂ ಕಮಿಟಿ ಮುಖಂಡರು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಬೆಳಗಾವಿ ನಗರದ ಮುಸ್ಲಿಂ ಕಮಿಟಿ ಹಾಗೂ ಪ್ರಮುಖ ಮುಖಂಡರು ದೆಹಲಿ ಮೂಲದ ನಾಜಿಯಾ ಇಲಾಹಿ ಖಾನ್ ಎಂಬಾಕೆಯ ವಿರುದ್ಧ ನಗರದ ಮಾರ್ಕೆಟ್ ಪೊಲೀಸ್ ಠಾಣೆಗೆ ಭೇಟಿ ನೀಡಿ ಸಿಪಿಐ ಜೆ.ಎಂ. ಕಾಲಿಮಿರ್ಚಿ ಅವರಿಗೆ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ. ಆರೋಪಿ ಮಹಿಳೆಯು ಯುಟ್ಯೂಬ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಇಸ್ಲಾಂ ಧರ್ಮದ ಪ್ರವಾದಿ ಮೊಹಮ್ಮದ್ ಹಾಗೂ ಹಜರತ್ ಆಯಿಷಾ ಅವರ ಕುರಿತಾಗಿ ಅತ್ಯಂತ ಅಸಭ್ಯ, ಆಕ್ಷೇಪಾರ್ಹ ಮತ್ತು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ್ದಾಳೆ ಎಂದು ಆರೋಪಿಸಲಾಗಿದೆ.
ಈ ಕೃತ್ಯವು ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ಆಘಾತವನ್ನುಂಟು ಮಾಡಿದ್ದು, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕದಡುವ ಸಂಚಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಪ್ರತಿಭಟನಾತ್ಮಕ ದೂರಿನ ನೇತೃತ್ವವನ್ನು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಮಾಜಿ ಅಧ್ಯಕ್ಷರಾದ ಅಬ್ದುಲ್ ಗಫಾರ್ ಘೀವಾಲೆ, ಇಕ್ಬಾಲ ಅಹ್ಮದ್ ಎಸ್. ಜಕಾತಿ, ಫಹೀಮ್ ನಾಯ್ಕವಾಡಿ, ಬಾಬುಲಾಲ್ ಹಸನಸಾಬ್ ಮುಜಾವರ್, ಸಮೀವುಲ್ಲಾ ಮುಲ್ಲಾ, ರಿಜ್ವಾನ್ ಬೇಪಾರಿ, ಅಲಾವುದ್ದೀನ್ ಕಿಲ್ಲೇದಾರ್ ಮತ್ತು ಅಮ್ಜದ್ ಮೋಮಿನ್ ಸೇರಿದಂತೆ ಹಲವು ಪ್ರಮುಖರು ವಹಿಸಿದ್ದರು. ದೂರಿನೊಂದಿಗೆ ವಿಡಿಯೋ ಪುರಾವೆಗಳನ್ನು ಒಳಗೊಂಡ ಪೆನ್‌ಡ್ರೈವ್ ಸಾಕ್ಷ್ಯವನ್ನು ಸ್ವೀಕರಿಸಿರುವ ಮಾರ್ಕೆಟ್ ಠಾಣೆಯ ಪೊಲೀಸ್ ಇನ್‌್ಿಪೆಕ್ಟರ್ ಅವರು, ಪ್ರಕರಣದ ಕುರಿತು ಸಂಪೂರ್ಣ ಪರಿಶೀಲನೆ ನಡೆಸಿ ಶೀಘ್ರದಲ್ಲೇ ಸೂಕ್ತ ಕಾನೂನು ಕ್ರಮ ಜರುಗಿಸುವುದಾಗಿ ಭರವಸೆ ನೀಡಿದ್ದಾರೆ.
ಬೆಳಗಾವಿಯ ಅಂಜುಮನ್ ಇಸ್ಲಾಂ ಸಂಸ್ಥೆಯ ಪದಾಧಿಕಾರಿಗಳು ದೆಹಲಿ ಮೂಲದ ನಾಜಿಯಾ ಇಲಾಹಿ ಖಾನ್ ಎಂಬಾಕೆಯ ವಿರುದ್ಧ ನಗರದ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮೊಹಮ್ಮದ್ ಪೈಗಂಬರ್ ಹಾಗೂ ಹಜರತ್ ಆಯಿಷಾ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವುದಾಗಿ ಆರೋಪಿಸಿ, ಆಕೆಯನ್ನು ಬಂಧಿಸುವಂತೆ ಒತ್ತಾಯಿಸಲಾಗಿದೆ. ದೂರಿನೊಂದಿಗೆ ಪೆನ್‌ಡ್ರೈವ್ ಸಾಕ್ಷ್ಯವನ್ನು ಸ್ವೀಕರಿಸಿರುವ ಪೊಲೀಸರು, ಪರಿಶೀಲನೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button