Uncategorized

ಗುಡಿಸಿ, ಒರೆಸಿ, ಪಾತ್ರೆ ತೊಳೆಯುತ್ತೇನೆ, ಆದರೂ ಹೆಂಡತಿ ಹೊಡೆಯುತ್ತಾಳೆ: ಲೈವ್ ವಿಡಿಯೋ ಮಾಡಿ ಜೀವ ಬಿಟ್ಟ ಉದ್ಯಮಿ…!!!

ಗುಡಿಸಿ, ಒರೆಸಿ, ಪಾತ್ರೆ ತೊಳೆಯುತ್ತೇನೆ, ಆದರೂ ಹೆಂಡತಿ ಹೊಡೆಯುತ್ತಾಳೆ: ಲೈವ್ ವಿಡಿಯೋ ಮಾಡಿ ಜೀವ ಬಿಟ್ಟ ಉದ್ಯಮಿ…!!!
ಮನೆಕೆಲಸ ಮಾಡುತ್ತಿದ್ದರೂ ಕಿರುಕುಳ; ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾದ ಉದ್ಯಮಿ
ಹರಿಯಾಣದ ಫರಿದಾಬಾದ್‌ನಲ್ಲಿ 28 ವರ್ಷದ ಉದ್ಯಮಿ ರಾಹುಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆಗೂ ಮುನ್ನ ಅವರು ಇನ್‌ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡು, ಪತ್ನಿ ಹಾಗೂ ಅತ್ತೆ-ಮಾವರಿಂದ ಮಾನಸಿಕ ಮತ್ತು ದೈಹಿಕ ಕಿರುಕುಳ ಎದುರಿಸುತ್ತಿದ್ದೇನೆ ಎಂದು ಆರೋಪಿಸಿದ್ದಾರೆ.
ವಿಡಿಯೋದಲ್ಲಿ, ಮನೆ ಗುಡಿಸುವುದು, ಒರೆಸುವುದು, ಪಾತ್ರೆ ತೊಳೆಯುವುದು ಸೇರಿದಂತೆ ಎಲ್ಲ ಮನೆಕೆಲಸಗಳನ್ನು ಮಾಡುತ್ತಿದ್ದರೂ ತನ್ನ ಮೇಲೆ ಹಲ್ಲೆ ನಡೆಸಲಾಗುತ್ತಿತ್ತು ಎಂದು ರಾಹುಲ್ ಹೇಳಿಕೊಂಡಿದ್ದಾರೆ. ತನ್ನ ಸಾವಿಗೆ ಪತ್ನಿ ಹಾಗೂ ಆಕೆಯ ಕುಟುಂಬವೇ ಕಾರಣ ಎಂದು ಅವರು ಆರೋಪಿಸಿದ್ದಾರೆ.
ಘಟನೆಯ ಬಳಿಕ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ವೈರಲ್ ವಿಡಿಯೋ ಸೇರಿ ಪ್ರಕರಣದ ಎಲ್ಲ ಆಯಾಮಗಳ ಕುರಿತು ತನಿಖೆ ನಡೆಸುತ್ತಿದ್ದಾರೆ. ವಿಡಿಯೋದಲ್ಲಿನ ಆರೋಪಗಳ ಸತ್ಯಾಸತ್ಯತೆ ತನಿಖೆಯ ನಂತರವೇ ತಿಳಿಯಲಿದೆ.

Related Articles

Leave a Reply

Your email address will not be published. Required fields are marked *

Back to top button