Uncategorized

₹2.65 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು

ಯಮಕನಮರಡಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ಸತೀಶ ಜಾರಕಿಹೊಳಿ ಅವರ ಮಾರ್ಗದರ್ಶನದ ಮೇರೆಗೆ, ಯಮಕನಮರಡಿ ವಿಧಾನಸಭಾ ಕ್ಷೇತ್ರದ ಕಾಕತಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಆರ್.ಡಿ.ಪಿ.ಆರ್. ಯೋಜನೆಯಡಿ ಸುಮಾರು ₹2.65 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು
ಕಾಮಗಾರಿಗಳ ವಿವರ:
📍 ಹೊನಗಾ ಗ್ರಾಮ – ₹45 ಲಕ್ಷ ವೆಚ್ಚದ ಸಿ.ಸಿ. ರಸ್ತೆ ನಿರ್ಮಾಣ (ಕಚೇರಿ ಗಲ್ಲಿ ಹಾಗೂ ಜ್ಯೋತಿ ನಗರ 3ನೇ ಕ್ರಾಸ್)
📍 ಕಾಕತಿ ಗ್ರಾಮ – ₹1 ಕೋಟಿ ವೆಚ್ಚದ ಸಿ.ಸಿ. ರಸ್ತೆ ಹಾಗೂ ರಸ್ತೆ ಡಾಂಬರೀಕರಣ (ಚೆನ್ನಮ್ಮ ರಸ್ತೆ, ಪ್ಲಾಟ್ ಗಲ್ಲಿ ಹಾಗೂ ಬ್ರಹ್ಮ ಗಲ್ಲಿ)
📍 ಸೋನಟ್ಟಿ ಗ್ರಾಮ – ₹20 ಲಕ್ಷ ವೆಚ್ಚದ ಸಿ.ಸಿ. ರಸ್ತೆ ನಿರ್ಮಾಣ
📍 ಹಳೆಹೊಸೂರ್ ಗ್ರಾಮ – ₹75 ಲಕ್ಷ ವೆಚ್ಚದ ಸಿ.ಸಿ. ರಸ್ತೆ ನಿರ್ಮಾಣ
📍 ವಿರನಬಾವಿ ಗ್ರಾಮ – ₹25 ಲಕ್ಷ ವೆಚ್ಚದ ಸಿ.ಸಿ. ರಸ್ತೆ ನಿರ್ಮಾಣ
ಈ ಅಭಿವೃದ್ಧಿ ಕಾಮಗಾರಿಗಳು ಗ್ರಾಮೀಣ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಿ, ಸಾರ್ವಜನಿಕರಿಗೆ ಉತ್ತಮ ಸಂಚಾರ ವ್ಯವಸ್ಥೆ ಕಲ್ಪಿಸಲಿವೆ ಎಂಬ ವಿಶ್ವಾಸವಿದೆ.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರು, ಕಾಕತಿ ಬ್ಲಾಕ್ ಅಧ್ಯಕ್ಷರು, ಮಾಜಿ ತಾಲೂಕು ಪಂಚಾಯತ್ ಸದಸ್ಯರು, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ವಿವಿಧ ಗ್ರಾಮಗಳ ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಹಿರಿಯರು, ಯುವಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button