Uncategorized

ಅಂಬೋಲಿಯಲ್ಲಿ ಧಾರಾಕಾರ ಮಳೆ: ಜಲಪಾತಗಳ ವೈಭವಕ್ಕೆ ಪ್ರವಾಸಿಗರ ದಂಡು

ಮಹಾರಾಷ್ಟ್ರದ ಅಂಬೋಲಿಯಲ್ಲಿ ಧಾರಾಕಾರ ಮಳೆ: ಜಲಪಾತಗಳ ವೈಭವಕ್ಕೆ ಪ್ರವಾಸಿಗರ ದಂಡು
ಅಂಬೋಲಿ (ಮಹಾರಾಷ್ಟ್ರ): ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಅಂಬೋಲಿ ಘಾಟ್ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಪರಿಣಾಮ ಬೆಟ್ಟ-ಗುಡ್ಡಗಳಿಂದ ನೀರು ಧುಮ್ಮಿಕ್ಕಿ ಹರಿಯುತ್ತಿದ್ದು, ಅನೇಕ ಜಲಪಾತಗಳು ಮೈದುಂಬಿ ಹರಿಯುತ್ತಿರುವ ಮನಮೋಹಕ ದೃಶ್ಯಗಳು ಕಂಡು ಬರುತ್ತಿವೆ.
ಅಂಬೋಲಿಯ ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧ ಭಾಗಗಳಿಂದ ಹಾಗೂ ನೆರೆಯ ಕರ್ನಾಟಕದಿಂದಲೂ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಆದರೆ ನಿರಂತರ ಮಳೆಯ ಹಿನ್ನೆಲೆಯಲ್ಲಿ ರಸ್ತೆಗಳಲ್ಲಿ ಜಾರುವಿಕೆ ಹೆಚ್ಚಿರುವುದರಿಂದ ವಾಹನ ಸವಾರರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಸಂಚರಿಸುವಂತೆ ಸ್ಥಳೀಯ ಆಡಳಿತ ಮನವಿ ಮಾಡಿದೆ.
ಮಳೆಯ ಆರ್ಭಟ ಮುಂದುವರಿಯುವ ಸಾಧ್ಯತೆ ಇರುವುದರಿಂದ ಘಾಟ್ ಪ್ರದೇಶಗಳಿಗೆ ಭೇಟಿ ನೀಡುವವರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button