Uncategorized

ಹುದಲಿ ಸಮೀಪ ನಿರ್ಮಾಣ ಹಂತದಲ್ಲಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ SATISHJARKIHOLI

ಇಂದು ಬೆಳಗಾವಿ ಜಿಲ್ಲೆಯ ಹುದಲಿ ಸಮೀಪ ನಿರ್ಮಾಣ ಹಂತದಲ್ಲಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿಯನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ.
ಕಾಮಗಾರಿಯ ಪ್ರಗತಿ, ತಾಂತ್ರಿಕ ಗುಣಮಟ್ಟ ಹಾಗೂ ಸುರಕ್ಷತಾ ಕ್ರಮಗಳ ಕುರಿತು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದು, ಸಾರ್ವಜನಿಕರಿಗೆ ಆಗುತ್ತಿರುವ ತಾತ್ಕಾಲಿಕ ಸಂಚಾರ ತೊಂದರೆಗಳನ್ನು ಶೀಘ್ರದಲ್ಲೇ ನಿವಾರಿಸುವಂತೆ ಸೂಚನೆ ನೀಡಿದೆ. ರೈಲ್ವೆ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಕಾಮಗಾರಿಯ ವಿವಿಧ ಹಂತಗಳ ಬಗ್ಗೆ ಚರ್ಚಿಸಿ, ಅಗತ್ಯವಿರುವ ಸಮನ್ವಯದೊಂದಿಗೆ ಕೆಲಸವನ್ನು ವೇಗಗೊಳಿಸುವಂತೆ ಸೂಚಿಸಿದೆ.
ಯಾವುದೇ ವಿಳಂಬವಿಲ್ಲದೆ ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ಸಾರ್ವಜನಿಕರ ಸುರಕ್ಷತೆಗೆ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ.
ಈ ರೈಲ್ವೆ ಬ್ರಿಜ್ ಪೂರ್ಣಗೊಂಡ ಬಳಿಕ ಗೋಕಾಕ ಮತ್ತು ಬೆಳಗಾವಿ ನಗರ ಮಧ್ಯೆ ದಿನನಿತ್ಯ ಸಂಚರಿಸುವ ಮತ್ತು ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಸುಗಮ ಸಂಚಾರ ವ್ಯವಸ್ಥೆ ದೊರೆಯಲಿದ್ದು, ವಾಹನ ದಟ್ಟಣೆ ಕಡಿಮೆಯಾಗುವ ಜೊತೆಗೆ ರಸ್ತೆ ಸುರಕ್ಷತೆಯೂ ಮತ್ತಷ್ಟು ಹೆಚ್ಚಲಿದೆ.

Related Articles

Leave a Reply

Your email address will not be published. Required fields are marked *

Back to top button