Uncategorized
ಮಹಾರಾಜರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ

ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಹಿಂದವಿ ಸ್ವರಾಜ್ಯದ ಸಂಸ್ಥಾಪಕ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಅಶ್ವಾರೂಢ ಪುತ್ಥಳಿ ಉದ್ಘಾಟನಾ ಸಮಾರಂಭದಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಭಾಗವಹಿಸಿ, ಮಹಾರಾಜರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿದರು
ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಶೌರ್ಯ, ಸ್ವಾಭಿಮಾನ, ರಾಷ್ಟ್ರಭಕ್ತಿ ಮತ್ತು ಜನಪರ ಆಡಳಿತದ ಆದರ್ಶಗಳು ಇಂದಿಗೂ ಯುವಜನತೆಗೆ ಸ್ಫೂರ್ತಿದಾಯಕವಾಗಿವೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕೆಂದು ಈ ಸಂದರ್ಭದಲ್ಲಿ ಕರೆ ನೀಡಿದೆ.
ಈ ಸಂದರ್ಭದಲ್ಲಿ ಗೋವಿಪುರಮ ಗೋಸಾವಿ ಮಹಾಸಂಸ್ಥಾನ ಮಠದ ಪ.ಪೂ. ಶ್ರೀ ಮಂಜುನಾಥ ಮಹಾಸ್ವಾಮಿಗಳು, ಮಾಜಿ ಸಚಿವರಾದ ಶ್ರೀ ಸಂತೋಷ ಲಾಡ್, ಶಾಸಕರಾದ ಶ್ರೀ ಗಣೇಶ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯರಾದ ಶ್ರೀ ಪ್ರಕಾಶ ಹುಕ್ಕೇರಿ, ಪದ್ಮಶ್ರೀ ಡಾ. ಪ್ರಭಾಕರ ಕೋರೆ, ಮಾಜಿ ಸಚಿವರಾದ ಶ್ರೀ ಶ್ರೀಮಂತ ಪಾಟೀಲ ಸೇರಿದಂತೆ ಅನೇಕ ಗಣ್ಯರು ಹಾಗೂ ಅಪಾರ ಸಂಖ್ಯೆಯ ಭಕ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.



