Uncategorized
ಸವಣೂರಿನಲ್ಲಿ ಮುಖ್ಯಮಂತ್ರಿ ಆಸೆ ಬಿಚ್ಚಿಟ್ಟ ಡಿಕೆಶಿ

ಹಾವೇರಿ: ರಾಜ್ಯದಲ್ಲಿ ಉಪಚುನಾವಣೆ ದಿನಾಂಕ ಸಮೀಪಿಸುತ್ತಿದೆ. ಎಲ್ಲಾ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪರವಾಗಿ ಭರ್ಜರಿಯಾಗಿ ಮತಯಾಚನೆಯಲ್ಲಿ ತೊಡಗಿದೆ. ಈ ನಡುವೆ ಶಿಗ್ಗಾವಿಯಲ್ಲಿ ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನಸಭಾ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಕಾಂಗ್ರೆಸ್ ಶತಾಯಗತಾಯ ಗೆಲ್ಲಲೇಬೇಕೆಂದು ಪಣ ತೊಟ್ಟಿದೆ.
ಈ ಹಿನ್ನೆಲೆ ಇಂದು ಮತಯಾಚನೆ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಪರವಾಗಿ ಅಬ್ಬರದ ಪ್ರಚಾರ ನಡೆಸಿದ್ದಾರೆ.
ನಾನು ಸಿಎಂ ಆಗಿದ್ರೆ ಬಡವರಿಗೆ ಮನೆ!
ಸವಣೂರಿನಲ್ಲಿ ಯಾಸಿರ್ ಖಾನ್ ಪಠಾಣ್ ಪರವಾಗಿ ಮತಯಾಚನೆ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ನಾನು ಸಿಎಂ ಆಗಿದ್ದರೆ ಎಲ್ಲಾ ಬಡವರಿಗೆ ಮನೆ ಕಟ್ಟಿಸಿಕೊಡ್ತಿದ್ದೆ ಎಂದು ರೋಡ್ ಶೋ ಸಂದರ್ಭದಲ್ಲಿ ಹೇಳಿದರು. ಸವಣೂರನಲ್ಲಿನ ಮನೆಗಳನ್ನು ನೋಡಿದ್ರೆ ಹೊಟ್ಟೆ ಉರಿಯುತ್ತೆ, ಬಡವರಿಗೆ ಮನೆ ಕಟ್ಟಿಸಿಕೊಡಲೂ ಬೊಮ್ಮಾಯಿ ಅವ್ರಿಗೆ ಆಗಿಲ್ಲ. ಕೊಟ್ಟ ಕುದುರೆ ಏರಲಾಗದೆ ಮತ್ತೊಂದು ಕುದುರೆ ಏರಲು ಬಯಸುವವನು ವೀರನು ಅಲ್ಲ ಧೀರನು ಅಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ವಿರುದ್ಧ ಡಿಕೆ ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು.