ಕಾರವಾರ

  • ಭಾರೀ ಮಳೆಯ ಪರಿಣಾಮ ಮೂರು ವಿಮಾನಗಳ ಡೈವರ್ಟ್.

    ಮಂಗಳೂರು/ಕಾರವಾರ: ಕಳೆದ ಒಂದು ತಿಂಗಳಿನಿಂದ ಸುಡು ಬಿಸಿಲಿನಿಂದ ಕಂಗಾಲಾಗಿದ್ದ ಕರಾವಳಿಯ ಜನರಿಗೆ ಬುಧವಾರ ರಾತ್ರಿ ಸುರಿದ ಬೇಸಿಗೆಯ ಮಳೆ ತಂಪಿನ ಅನುಭವ ನೀಡಿದೆ. ಮಳೆ ತಂಪು ಸಿಂಚನದಿಂದ ಜನರು ಖುಷಿ ಪಟ್ಟರು. ಬುಧವಾರ ಸಂಜೆಯ ವೇಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮತ್ತು ಕಡಬ ತಾಲೂಕಿನ ವಿವಿಧೆಡೆ ಮಳೆಯಾಗಿದೆ. ರಾತ್ರಿ ವೇಳೆಗೆ ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಮಾಣಿ, ಸುರತ್ಕಲ್, ಮೂಡಬಿದ್ರೆ, ಕಾರ್ಕಳ ಮೊದಲಾದೆಡೆ ಉತ್ತಮ ಮಳೆಯಾಗಿದೆ. ಮಂಗಳೂರು ನಗರದಲ್ಲಿ ರಾತ್ರಿ ವೇಳೆಗೆ ಗುಡುಗು ಸಿಡಿಲಿನ ಅಬ್ಬರವು ಜೋರಾಗಿತ್ತು. ಇದರ ಪರಿಣಾಮ ಹಲವೆಡೆ ವಿದ್ಯುತ್ ವ್ಯತ್ಯಯವು ಉಂಟಾಗಿತ್ತು.…

    Read More »
  • ನಿರಾಶ್ರಿತ ಕುಟುಂಬಗಳೊಂದಿಗೆ ಸಭೆ ನಡೆಸಿದ ಶಾಸಕ ಸತೀಶ್ ಸೈಲ್.

    ಕಾರವಾರ: ಅಂಕೋಲಾದ ಅಲಗೇರಿಯಲ್ಲಿ ನಾಗರಿಕ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಭೂಸ್ವಾದೀನಗೊಳಕ್ಕೊಳಗಾದ ನಿರಾಶ್ರಿತರಿಗೆ ನಿವೇಶನ ಹಂಚಿಕೆ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಸತೀಶ್ ಸೈಲ್ ನೇತೃತ್ವದಲ್ಲಿ ಸಭೆ ನಡೆಸಿದ್ದು, ನಿವೇಶನ ಹಂಚಿಕೆಗೆ ಗುರುತಿಸಿರುವ ಜಾಗಕ್ಕೆ ಬಹುತೇಕ ನಿರಾಶ್ರಿತರು ಸಹಮತ ಸೂಚಿಸಿದ್ದಾರೆ. ಆದರೆ, ಅಗತ್ಯ ಮೂಲ ಸೌಕರ್ಯ ಸಂಪೂರ್ಣ ಕಲ್ಪಿಸಿದ ಬಳಿಕವೇ ಈಗಿರುವ ಮನೆ ಜಮೀನು ತೊರೆಯುವುದಾಗಿ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಕೋರ್ಟ್ ಹಾಲ್‌ನಲ್ಲಿ ಶಾಸಕ ಸತೀಶ್ ಸೈಲ್ ಹಾಗೂ ಅಪರ ಜಿಲ್ಲಾಧಿಕಾರಿ ಸಾಜಿದ್ಮುಲ್ಲಾ ಅವರ ಸಮ್ಮುಖದಲ್ಲಿ ನಿರಾಶ್ರಿತ ಕುಟುಂಬಗಳೊಂದಿಗೆ ಸಭೆ ನಡೆಯಿತು. ಈ ವೇಳೆ…

    Read More »
  • ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿ ಬಿದ್ದಲಾರಿ

    ಯಲ್ಲಾಪುರ: ರಾಷ್ಟ್ರೀಯ ಹೆದ್ದಾರಿ-63ರ ಯಲ್ಲಾಪುರ ತಾಲೂಕಿನ ಇಡಗುಂದಿಯ ಬಳಿ ಸರಕು ತುಂಬಿದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿ ಬಿದ್ಧ ಘಟನೆ ಸೋಮವಾರ(ನ.11)ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಹೊರಟ್ಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಬಲಬದಿಗೆ ಹೋಗಿ ಸುರಕ್ಷತೆಗೆ ಅಳವಡಿಸಿದ ತಡೆಬೇಲಿ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಗದ್ದೆಗೆ ಉರುಳಿ ಬಿದ್ದಿದೆ. ಲಾರಿ ಸಂಪೂರ್ಣ ಜಖಂ ಆಗಿದ್ದು,ಚಾಲಕ ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    Read More »
Back to top button