ಕೊಪ್ಪಳ
-
ಸಿನಿಮಾ ಸ್ಟೈಲ್ನಲ್ಲಿ ಸುತ್ತುವರೆದು ವ್ಯಕ್ತಿಯ ಭೀಕರ ಕೊಲೆ
ಕೊಪ್ಪಳ: ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಹೃದಯ ಭಾಗವಾದ ಸಿಂಧನೂರು ಸರ್ಕಲ್ನಲ್ಲಿ ಭಾನುವಾರ ರಾತ್ರಿ ಸಿನಿಮಾ ಸ್ಟೈಲ್ನಲ್ಲಿ ನಡೆದ ವ್ಯಕ್ತಿಯೊಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಏಳು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸಿಸಿಟಿವಿಯಲ್ಲಿ ಕೊಲೆ ದೃಶ್ಯ ಸೆರೆ: ಸಿಂಧನೂರು ಸರ್ಕಲ್ನಲ್ಲಿರುವ ಬೇಕರಿಯೊಂದರ ಮುಂಭಾಗದಲ್ಲಿ ಚೆನ್ನಪ್ಪ ನಾರಿನಾಳ ಎಂಬ ವ್ಯಕ್ತಿಯ ಕೊಲೆಯಾಗಿದ್ದು, ಕೊಲೆಯ ಸಂಪೂರ್ಣ ಚಿತ್ರಣ ಬೇಕರಿಯಲ್ಲಿ ಹಾಕಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್ ಮೇಲೆ ಬರುತ್ತಿದ್ದ ಚೆನ್ನಪ್ಪನನ್ನು ಅಟ್ಟಾಡಿಸಿಕೊಂಡು ಬಂದ ಇಬ್ಬರು ದುಷ್ಕರ್ಮಿಗಳು, ಎರಡೇ ನಿಮಿಷದಲ್ಲಿ ಕೊಲೆ ಮಾಡಿ ಪರಾರಿಯಾಗುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಬೇಕರಿ ಒಳ ನುಗ್ಗಿ…
Read More » -
ಗದಗ- ವಾಡಿ ರೈಲು ಯೋಜನೆಗೆ ಕೇಂದ್ರ ರೈಲ್ವೇ ರಾಜ್ಯ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು.
ಕೊಪ್ಪಳ: ಗದಗ- ವಾಡಿ ರೈಲು ಯೋಜನೆಗೆ ಕೇಂದ್ರ ರೈಲ್ವೇ ರಾಜ್ಯ ಸಚಿವ ವಿ.ಸೋಮಣ್ಣ ಚಾಲನೆ ನೀಡಿದರು. ಕುಷ್ಟಗಿ ರೈಲು ನಿಲ್ದಾಣದಲ್ಲಿ ಕುಷ್ಟಗಿ- ಹುಬ್ಬಳ್ಳಿ ರೈಲ್ವೇಗೆ ಗುರುವಾರ (ಮೇ 15) ಚಾಲನೆ ನೀಡಲಾಯಿತು. ಗದಗ-ವಾಡಿ ರೈಲ್ವೇ ಯೋಜನೆ ಈ ಭಾಗದ ಬಹು ನಿರೀಕ್ಷಿತ ಯೋಜನೆಯಾಗಿತ್ತು. ಕಳೆದ 10 ವರ್ಷದಲ್ಲಿ ರೈಲ್ವೇ ಕಾಮಗಾರಿ ತ್ವರಿತವಾಗಿ ನಡೆದು, ತಳಕಲ್-ಕುಷ್ಟಗಿಯವರೆಗೂ 56 ಕಿಮೀ ರೈಲ್ವೇ ಹಳಿ ಕಾಮಗಾರಿ ಪೂರ್ಣಗೊಂಡಿದೆ. ಹಿಂದೆ ಇದ್ದ ಕೇಂದ್ರ ರೈಲ್ವೆ ಖಾತೆ ಸಚಿವರಾದ ಮಲ್ಲಿಕಾರ್ಜುನ ಖರ್ಗೆಜಿ ಯೋಜನೆ ಜಾರಿಗೆ ತಂದಿದ್ದರು ಮತ್ತು ಯಲಬುರ್ಗಾ ಕ್ಷೇತ್ರ ಶಾಸಕರಾದ…
Read More » -
ರಕ್ಷಣೆಗಾಗಿ ಠಾಣೆಯ ಮೊರೆ ಹೋದ ಹಿಂದೂ-ಮುಸ್ಲಿಮ್ ಪ್ರೇಮ ವಿವಾಹದಜೋಡಿ
ಕೊಪ್ಪಳ: ಏಪ್ರಿಲ್ 23 ರಂದು ಪ್ರೇಮಿಗಳು ರಿಜಿಸ್ಟರ್ ಮದುವೆಯಾಗಿದ್ದರು. ಮದುವೆಯಾದ ಬೆನ್ನಲ್ಲೇ ಯುವತಿಯ ಮನೆಯವರು ಪ್ರೇಮಿಗಳಿಗೆ ಜೀವ ಬೆದರಿಕೆ ಹಾಕಿದ್ದಾರೆ. ಬೆದರಿಕೆ ಬೆಂದ ಬೆನ್ನಲ್ಲೇ ಜೋಡಿಗಳು ರಕ್ಷಣೆಗಾಗಿ ಠಾಣೆಯ ಮೊರೆ ಹೋಗಿದ್ದಾರೆ. ಕೊಪ್ಪಳದ ಭಾಗ್ಯನಗರದ ನಿವಾಸಿಗಳಾದ ಪ್ರಜ್ವಲ್ ಹಾಗೂ ಥೈಶಿನ್ ಕಳೆದ 6 ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರು ಈಗ ಕೊಪ್ಪಳದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ.
Read More » -
ಈ ಜನ್ಮದಲ್ಲಲ್ಲ… ಮುಂದಿನ ಜನ್ಮದಲ್ಲೂ ಕಾಂಗ್ರೆಸ್’ಗೆ ಮಾತ್ರ ಹೋಗಲ್ಲ: ಯತ್ನಾಳ
ಕೊಪ್ಪಳ: ಬಿ.ಎಸ್.ವೈ ಮತ್ತು ವಿಜಯೇಂದ್ರಗೆ ನಾಚಿಕೆ ಮಾನ ಮರ್ಯಾದೆ ಇದೇಯಾ?- ಯತ್ನಾಳ ಈ ಜನ್ಮದಲ್ಲಲ್ಲ ಮುಂದಿನ ಜನ್ಮದಲ್ಲೂ ಕಾಂಗ್ರೆಸ್’ಗೆ ಮಾತ್ರ ಹೋಗಲ್ಲ. ಸುಳ್ಳು ಸುದ್ಧಿ ಹಬ್ಬಿಸುವವರಿಗೆ ನಾಚಿಕೆ ಮಾನ ಮರ್ಯಾದೆ ಇದೇಯಾ ಎನ್ನುವ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಮತ್ತೇ ಬಿ.ಎಸ್.ವೈ ಮತ್ತು ವಿಜಯೇಂದ್ರ ವಿರುದ್ಧ ಮತ್ತೇ ಕಿಡಿಕಾರಿದ್ದಾರೆ. ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದರು. ಕಾಂಗ್ರೆಸ್ಸಿಗೆ ಈ ಜನ್ಮದಲ್ಲೂ ಹೋಗಲ್ಲ. ಮುಂದಿನ ಜನ್ಮದಲ್ಲೂ ಹೋಗಲ್ಲ. ಕಾಂಗ್ರೆಸ್ ಮುಸ್ಲಿಂಮರ ಪಕ್ಷ. ಹಿಂದೂಗಳ ಪಕ್ಷವಲ್ಲ. ವಿಜಯೇಂದ್ರನ ಟೀಂನ ನಕಲಿ ಸಾಮಾಜಿಕ ಜಾಲತಾಣವಿದ್ದು, ನಕಲಿ…
Read More » -
ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಕೊಚ್ಚಿ ಹೋದ ನರೇಗಾ ಕೂಲಿಕಾರ.
ಗಂಗಾವತಿ (ಕೊಪ್ಪಳ) : ನರೇಗಾದ ಕೂಲಿಕಾರರೊಬ್ಬರು ನೀರು ಕುಡಿಯಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು, ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ತಾಲೂಕಿನ ಚಿಕ್ಕಡಂಕನಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವೇಶ್ವರ ಕ್ಯಾಂಪ್ (ನಂಬರ್ 28ನೇ ಕಾಲುವೆ) ಬಳಿ ಭಾನುವಾರ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಹನುಮಂತಪ್ಪ ಬಾಗಪ್ಪ ಅದಾಪುರ ಎಂದು ಗುರುತಿಸಲಾಗಿದೆ. ಬಡ ಕುಟುಂಬಕ್ಕೆ ಸೇರಿದ್ದ ಈ ವ್ಯಕ್ತಿ ಗ್ರಾಮ ಪಂಚಾಯಿತಿಗಳು ಅನುಷ್ಠಾನ ಮಾಡುವ ಕೇಂದ್ರ ಸರ್ಕಾರದ ನರೇಗಾ ಕೂಲಿ ಕೆಲಸಕ್ಕೆ ಬಂದಿದ್ದ ಎಂದು ಗೊತ್ತಾಗಿದೆ. ಕೆಲಸ ನಡೆಯುವ ಸ್ಥಳದಲ್ಲಿ ಕೂಲಿಕಾರರಿಗೆ ಸೂಕ್ತ ಸೌಲಭ್ಯಗಳನ್ನು…
Read More » -
ಮಗಳ ಮದುವೆಗೆ ಕೂಡಿಟ್ಟ ಚಿನ್ನಾಭರಣ ಮತ್ತು ನಗದು ಹಣವನ್ನು ಹಾಡಹಗಲೇ ದೋಚಿದ ಕಳ್ಳರು.
ಗಂಗಾವತಿ: ಆಟೋ ಚಾಲಕರೊಬ್ಬರು ತನ್ನ ಮಗಳ ಮದುವೆಗೆಂದು ಕೂಡಿಟ್ಟಿದ್ದ ಚಿನ್ನಾಭರಣ ಮತ್ತು ನಗದು ಹಣವನ್ನು ಹಾಡಹಗಲೇ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಗಂಗಾವತಿ ತಾಲೂಕಿನ ವೆಂಕಟಗಿರಿ ಹೋಬಳಿಯ ಆರ್ಹಾಳ್ ಗ್ರಾಮದಲ್ಲಿ ನಡೆದಿದೆ. ಹಣ, ಚಿನ್ನಾಭರಣ ಕಳೆದುಕೊಂಡ ಕುಟುಂಬ ಗೋಳಾಡುತ್ತಿದೆ. ಆಟೋ ಚಾಲಕ ವೃತ್ತಿ ಮಾಡಿಕೊಂಡು ಜೀವನ ನಡೆಸುತ್ತಿದ್ದ ವಿರೇಶ ಅಡಿವೆಪ್ಪ ಪಟ್ಟಣಶೆಟ್ಟಿ ಎಂಬುವವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ವಿರೇಶ ಅವರ ಮನೆಯಲ್ಲಿದ್ದ ಹತ್ತುವರೆ ತೊಲೆ ಚಿನ್ನಾಭರಣ ಮತ್ತು 2.25 ಲಕ್ಷ ರೂಪಾಯಿ ನಗದು ಸೇರಿದಂತೆ ಒಟ್ಟು 5.60 ಲಕ್ಷ ಮೌಲ್ಯದ ನಗ-ನಾಣ್ಯ ಕದ್ದು…
Read More »