ಬೆಳಗಾವಿ
ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ ಟ್ರಾಫಿಕ್ ಪೊಲೀಸರಿಂದ ಜಾಗೃತಿ

ಬೆಳಗಾವಿ: ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವಂತೆ ನಗರದಲ್ಲಿ ಟ್ರಾಫಿಕ್ ಪೊಲೀಸರು ಜಾಗೃತಿ ಮೂಡಿಸಿದರು ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿಕೊಂಡು ವಾಹನ ಚಲಾಯಿಸಬೇಕೆಂದು ನಗರದ ಚನ್ನಮ್ಮ ವೃತ್ತದಲ್ಲಿ ನಗರ ಸಂಚಾರ ಪೊಲೀಸರು ವಿಶೇಷ ಅಭಿಯಾನ ನಡೆಸಿದರು.
ನಗರದಲ್ಲಿ ರಸ್ತೆ ಅಪಘಾತದಲ್ಲಿ ವಾಹನ ಸವಾರರು ಹೆಲ್ಮೆಟ್ ಧರಸಿದೆ ಮೃತಪಟ್ಟ ಘಟನೆ ಹೆಚ್ಚಾಗುತ್ತಿದೆ. ಆದ್ದರಿಂದ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕೆಂದು ಮೊದಲು ಹೆಲ್ಮೆಟ್ ಧರಿಸದ ಪೊಲೀಸ್ ಸಿಬ್ಬಂದಿಗಳಿಗೆ ದಂಡ ವಿಧಿಸಿದ್ದ ಸಂಚಾರ ಪೊಲೀಸರು ಈಗ ಸಾರ್ವಜನಿಕರು ಹೆಲ್ಮೆಟ್ ಧರಿಸದವರ ವಿರುದ್ಧ ವಿಶೇಷ ಅಭಿಯಾನ ನಡೆಸಿ ಜಾಗೃತಿ ಮೂಡಿಸಿದ್ದಾರೆ.