ರಾಯಚೂರು
-
ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಂದ ಸಮೀಕ್ಷ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತ ಉದ್ಘಾಟನೆ.
ರಾಯಚೂರು : ನೂತನವಾಗಿ ಆರಂಭಗೊಂಡ ಸಮೀಕ್ಷ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತವನ್ನು ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಉದ್ಘಾಟಿಸಿದರು. ರಾಯಚೂರು ತಾಲೂಕಿನ ಯಾಪಲದಿನ್ನಿಯಲ್ಲಿ ಶ್ರೀ ದಳಪತಿ ಚಂದ್ರಶೇಖರರೆಡ್ಡಿ ಸಾರಥ್ಯದಲ್ಲಿ ನೂತನವಾಗಿ ಆರಂಭಗೊಂಡ ಸಮೀಕ್ಷ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿ ಉದ್ಘಾಟಿಸಿ ಮಾತನಾಡಿದ ಅವರು ಈ ಸಹಕಾರಿ ಸಂಘ ರೈತ ವರ್ಗಕ್ಕೆ , ಕಾರ್ಮಿಕ ವರ್ಗಕ್ಕೆ, ವ್ಯಾಪಾರಸ್ಥರಿಗೆ ಅನುಕೂಲವಾಗಲಿ ಎಂದು ಶುಭ ಹಾರೈಸಿದರು. ಈ ಸಮಯದಲ್ಲಿ ಸಂಘದ ಪದಾಧಿಕಾರಿಗಳಿಂದ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಗೆ…
Read More » -
ದೇಶದೊಳಗೆ ನುಸುಳುಕೋರರು ಬರುತ್ತಿರುವ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ : ಮಾಜಿ ಸಚಿವ ಕುಮಾರಬಂಗಾರಪ್ಪ
ರಾಯಚೂರು : ದೇಶದೊಳಗೆ ನುಸುಳುಕೋರರು ಬರುತ್ತಿರುವುದರ ಕುರಿತಂತೆ ಮಾಹಿತಿಯನ್ನು ಸಂಗ್ರಹಿಸಲಾಗುತ್ತಿದೆ. ಅದರ ಮಾಹಿತಿ ಸಂಗ್ರಹಿಸಿ, ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ ಎಂದು ಮಾಜಿ ಸಚಿವ ಕುಮಾರಬಂಗಾರಪ್ಪ ಹೇಳಿದ್ದಾರೆ. ಮಾಜಿ ಸಂಸದ ಬಿ. ವಿ. ನಾಯಕ ಅವರ ನಿವಾಸದಲ್ಲಿ ಆಯೋಜಿಸಿದ್ದ ಮಾಧ್ಯಮಗೋಷ್ಟಿಯಲ್ಲಿ ಅವರು ಮಾತನಾಡಿದರು. ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ಪರ ಭಾಷೆ ನಟಿ ತಮನ್ನಾ ಆಯ್ಕೆ ಮಾಡಿರುವ ವಿಚಾರ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಸಹ ಒಬ್ಬ ಕಲಾವಿದ. ಕಾಂಟ್ರಾಕ್ಟರ್ ಯಾರು ಕರೆದಿದ್ದಾರೋ ಅವರಿಗೆ ಹೋಗುವಂತಹ ಕೆಲಸವನ್ನು ಅವರು ಮಾಡಿರಬಹುದು. ಕನ್ನಡಿಗರಿಗೆ ಕೊಟ್ಟಿದ್ದರೆ ಒಳ್ಳೆಯದಿತ್ತು…
Read More » -
ಸಿಡಿಲು ಬಡಿದು ಇಬ್ಬರು ಕುರಿಗಾಯಿ ಸಾವು
ರಾಯಚೂರು/ಹಾವೇರಿ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಿಡಿಲು ಸಹಿತ ಮಳೆ ಆರ್ಭಟ ಜೋರಾಗಿದೆ. ಬೆಂಗಳೂರಲ್ಲಿ ಮಳೆ ಅವಾಂತರಕ್ಕೆ ಮೂವರು ಸಾವನ್ನಪ್ಪಿದರೆ, ವಿವಿಧ ಜಿಲ್ಲೆಗಳಲ್ಲಿ ಜನರು ಸಿಡಿಲಿಗೆ ಬಲಿಯಾಗಿರುವ ಬಗ್ಗೆ ವರದಿಯಾಗಿದೆ. ಸೋಮವಾರ ರಾಯಚೂರು ಮತ್ತು ಹಾವೇರಿಯಲ್ಲಿ ತಲಾ ಒಬ್ಬ ವ್ಯಕ್ತಿ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಸಿಡಿಲು ಬಡಿದು ಇಬ್ಬರು ಕುರಿಗಾಯಿ ಸಾವು: ರಾಯಚೂರಿನ ಭೋಗಿರಾಮನಗುಂಡ(ಬಿ.ಆರ್.ಗುಂಡ)ಯಲ್ಲಿ ಸಿಡಿಲು ಬಡಿದು ಕುರಿಗಾಯಿ ಬಾಲಕ ಸಾವನ್ನಪ್ಪಿದ್ದಾನೆ. ಹನುಮಗೌಡ ನಾಯಕ (16) ಸಿಡಿಲು ಬಡಿದು ಮೃತಪಟ್ಟ ಬಾಲಕ. ಬಾಲಕ ಗ್ರಾಮದ ಹೊರ ವಲಯದಲ್ಲಿ ಶಂಕರಬಂಡಿ ಹೊಲದಲ್ಲಿ ಕುರಿ ಮೇಯಿಸುತ್ತಿರುವ ಸಂದರ್ಭದಲ್ಲಿ ಮಳೆ,…
Read More » -
ರಸ್ತೆ ಬದಿಯ ತಡೆಗೋಡೆಗೆ ಗೂಡ್ಸ್ ಪಿಕಪ್ ವಾಹನ ಡಿಕ್ಕಿ , ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ದುರ್ಮರಣ
ರಾಯಚೂರು: ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗೂಡ್ಸ್ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಬಳಿ ನಡೆದಿದೆ. ಅಪಘಾತದಲ್ಲಿ ನಾಗರಾಜ್(28), ಸೋಮು(38), ನಾಗಭೂಷಣ್(36) ಹಾಗೂ ಮುರಳಿ(38) ಮೃತಪಟ್ಟಿದ್ದಾರೆ. ಮೃತ ನಾಲ್ವರು ತೆಲಂಗಾಣದ ಹಿಂದೂಪುರ ನಿವಾಸಿಗಳು ಎಂದು ಗುರುತಿಸಲಾಗಿದೆ. ದೇವದುರ್ಗ ತಾಲೂಕಿನ ಗಬ್ಬೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತೆಲಂಗಾಣದ ಹಿಂದೂಪುರದಿಂದ ಯಾದಗಿರಿ ಜಿಲ್ಲೆಯ ಶಹಪುರದಲ್ಲಿ ನಡೆಯುವ ಕುರಿ ಸಂತೆಗೆ ಹೋಗುವ ವೇಳೆ ಅಪಘಾತ ಸಂಭವಿಸಿದೆ. ವೇಗವಾಗಿದ್ದ ಹಿನ್ನಲೆ ನಿಯಂತ್ರಣ ತಪ್ಪಿ…
Read More » -
ಬಹಿರ್ದೆಸೆಗೆ ತೆರಳಿದ್ದ ವೇಳೆ ಬೀದಿ ನಾಯಿ ದಾಳಿ , ಮೃತಪಟ್ಟ ಲಿಂಗಸೂಗೂರು ಗ್ರಾಮದ ಬಾಲಕ.
ರಾಯಚೂರು: ಬಹಿರ್ದೆಸೆಗೆ ತೆರಳಿದ್ದ ವೇಳೆ ಬೀದಿ ನಾಯಿ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಕಸಬಾ ಲಿಂಗಸೂಗೂರು ಗ್ರಾಮದ ಬಾಲಕ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬಾಗಲಕೋಟೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ರಾಯಚೂರು ಜಿಲ್ಲೆಯ ಕಸಬಾ ಲಿಂಗಸೂಗೂರು ಗ್ರಾಮದ ಸಿದ್ದಪ್ಪ ಬೀರಪ್ಪ(6) ಮೃತ ಬಾಲಕ. ಶನಿವಾರ ಸಂಜೆ ಸಮಯದಲ್ಲಿ ಬಾಲಕ ಸಿದ್ದಪ್ಪ ಬಹಿರ್ದೆಸೆಗೆಂದು ತೆರಳಿದ್ದ. ಈ ವೇಳೆ ಐದಾರು ಬೀದಿ ನಾಯಿಗಳ ಹಿಂಡು ದಾಳಿ ನಡೆಸಿದ್ದರಿಂದ ಬಾಲಕ ಗಂಭೀರ ಗಾಯಗೊಂಡಿದ್ದ. ಸ್ಥಳೀಯರು ನಾಯಿಗಳನ್ನು ಓಡಿಸಿ ಬಾಲಕನನ್ನು ರಕ್ಷಿಸಿ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗಿದೆ ಆಸ್ಪತ್ರೆಯಲ್ಲಿ ಬಾಲಕ…
Read More » -
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಗಳ ಕೊರತೆ, ರೋಗಿಗಳ ಪರದಾಟ .
ಮುದಗಲ್ :ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಹಾಗೂ ಅಧಿಕಾರಿಗಳ ನಿರ್ಲಕ್ಷದಿಂದ ಪಟ್ಟಣ ಸಮೀಪದ ಮಾಕಾಪೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳ ಕೊರತೆ ಯಿಂದ ರೋಗಿಗಳು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ. ಮಾಕಾಪೂರು ಗ್ರಾಮದ ಪ್ರಾಥಮಿಕ ಆರೋಗ್ಯದ ದೇಸಾಯಿಬೋಗಾಪೂರು ಉಪಕೇಂದ್ರ ವ್ಯಾಪ್ತಿಯಲ್ಲಿ ಆರು ಗ್ರಾಮಗಳು ಹನ್ನೆರಡು ತಾಂಡಾ ಗಳು ನಾಗಲಾಪೂರು ಆರೋಗ್ಯ ಉಪಕೇಂದ್ರ ವ್ಯಪ್ತಿಯಲ್ಲಿ ಐದು ಗ್ರಾಮಗಳು ಎರಡು ತಾಂಡಾ ಗಳು ಬನ್ನಿಗೋಳ ಉಪಕೇಂದ್ರ ವ್ಯಾಪ್ತಿಯಲ್ಲಿ ಆರು ಗ್ರಾಮಗಳು ಮಾಕಾಪೂರು ವ್ಯಾಪ್ತಿಯಲ್ಲಿ ಎಂಟು ಗ್ರಾಮಗಳು ಮತ್ತು 49 ಅಂಗನವಾಡಿ ಕೇಂದ್ರಗಳು ಒಳಪಡುತ್ತವೆ .ಇಲ್ಲಿ ಕಾರ್ಯನಿರ್ವಹಿಸುವ…
Read More » -
ಕಳ್ಳತನ ಪತ್ತೆಹಚ್ಚಲು ಮಸ್ಕಿ ಸಿಪಿಐ ನೇತೃತ್ವದಲ್ಲಿ ವಿಷೇಶ ತಂಡ ರಚನೆ.
ಮುದಗಲ್ : ಪಟ್ಟಣದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು,ಪತ್ತೆಹಚ್ಚಲು ಮಸ್ಕಿ ಸಿಪಿಐ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗುವುದು ಎಂದು ರಾಯಚೂರು ಜಿಲ್ಲಾ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಜಿ.ಹರೀಶ ಹೇಳಿದರು. ಪಟ್ಟಣದ ೨೨-೨೩ ನೇ ವಾರ್ಡಿನಲ್ಲಿ ಭಾನುವಾರ ರಾತ್ರಿ ಇಬ್ಬರು ಕಳ್ಳರು ಮೂರು ಮನೆಗಳ ಕೀಲಿ ಮುರಿದು,ಒಂದು ಮನೆಯಲ್ಲಿ ಸುಮಾರು ೨೦೦ ಗ್ರಾಂ ಬಂಗಾರ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಸಿಸಿ ಕ್ಯಾಮರಾದಲ್ಲಿ ಕಂಡು ಬಂದಿರುವ ಹಿನ್ನಲೆಯಲ್ಲಿ ಸ್ಥಳಕ್ಕೆ ಬೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪೋಲಿಸ್ ಇಲಾಖೆಗೆ ಸಾರ್ವಜನಿಕರು ಸಹಕಾರ ನೀಡಿದರೆ ಕಳ್ಳರನ್ನು…
Read More » -
ಅವಿರೋಧವಾಗಿ ಆಯ್ಕೆಯಾದ ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಿಗೆ ಸನ್ಮಾನ.
ಮುದಗಲ್ : ಪುರಸಭೆಯ ನೂತನ ಸ್ಥಾಯಿ ಸಮಿತಿ ಅಧಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ರಂಜಾನಬಿ ಹಸನಸಾಬ ರವರಿಗೆ ಪಟ್ಟಣದ ನೀರದೊಡ್ಡಿ ಅಂಗನವಾಡಿ ಕೇಂದ್ರದಲ್ಲಿ ಸನ್ಮಾನ ಮಾಡಿ ಗೌರವಿಸಿದರು ಈ ವೇಳೆ ವೆಂಕಟರಾಯನ್ ಪೇಟೆಯ ಸರಕಾರಿ ಶಾಲೆಯ ಮುಖ್ಯ ಶಿಕ್ಷಕ ಸಂಗಯ್ಯ ಹಿರೇಮಠ ಸಹಶಿಕ್ಷಕರಾದ ಅಂಜನಮ್ಮ ಶಶಿಕುಮಾರ ವಾರ್ಡನ ಹಿರಿಯರಾದ ಸೈಯದಸಾಬ ಅಂಗನವಾಡಿ ಕಾರ್ಯಕರ್ತೆಯರಾದ ಬಸಮ್ಮ ಚಾಂದಬಿ ರೇಣುಕಾ ಭಾರತಿ ಸಲ್ಮಾ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಮುನ್ನಾಬಾಯಿ ಸೇರಿದಂತೆ ಮುಂತಾದವರು ಇದ್ದರು
Read More » -
ವಿಶ್ವಕರ್ಮ ಸಮಾಜದ ವತಿಯಿಂದ ಅಮರ ಶಿಲ್ಪಿ ಜಕಣಾಚಾರಿ ಜಯಂತಿ ಆಚರಣೆ
ಮುದಗಲ್ ವಿಶ್ವಕರ್ಮ ಸಮಾಜದ ವತಿಯಿಂದ ಪಟ್ಟಣದಲ್ಲಿಸರಳವಾಗಿ ಅಮರ ಶಿಲ್ಪಿ ಜಕಣಾಚಾರಿ ಜಯಂತಿಯನ್ನು ಆಚರಿಸಲಾಯಿತು ಶ್ರೀನಿವಾಸ್ ಪತ್ತಾರ್ ಮಾತನಾಡಿ ಭಾರತೀಯ ಇತಿಹಾಸದಲ್ಲಿ ಕಲೆಗೆ ತನ್ನದೇ ಇತಿಹಾಸ ಇದೆ ಹಳೇಬೀಡು ಬೇಲೂರು ಸೋಮನಾಥಪುರ ಮತ್ತಿತರ ಕಡೆಗಳಲ್ಲಿ ಕೆತ್ತಿರುವ ಕೆತ್ತನೆಗಳ ಸಾಕ್ಷಿ ಎಂದರು ಶಿಲ್ಪಿ ಜಕಣಾಚಾರಿ ಅವರನ್ನು ಇಂದು ನಾವು ಸ್ಮರಿಸುವ ಮೂಲಕ ಕಲೆಗಳನ್ನು ಗೌರವದಿಂದ ಪೂಜಿಸಬೇಕಾಗುತ್ತದೆ ಅದರಂತೆ ನಮ್ಮ ಪ್ರಧಾನಿ ಮೋದಿಜಿ ಅವರು ವಿಶ್ವಕರ್ಮ ಯೋಜನೆಯನ್ನು ಜಾರಿಗೆ ತಂದರು ನಮ್ಮ ಸಂಸ್ಕೃತಿ ನಮ್ಮಲ್ಲಿನ ಕುಲಕಸುಬುಗಳಿಗೆ ಜೀವ ತುಂಬುವ ಕಾರ್ಯ ಮಾಡುತ್ತಿದ್ದು ನಮಗೆಲ್ಲ ಹೆಮ್ಮೆಯ ವಿಷಯ ಎಂದರು ಸಮಾಜದ…
Read More » -
ಮಾಕಾಪೂರು ಆಸ್ಪತ್ರೆಗೆ ಎಂಬಿಬಿಎಸ್ ವೈದ್ಯರನ್ನು ಆರೋಗ್ಯ ಕೇಂದ್ರಕ್ಕೆ ನೇಮಿಸಲು ಮನವಿ.
ಮುದಗಲ್ : ಪಟ್ಟಣ ಸಮೀಪದ ಮಾಕಾಪೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಬ್ಬಂದಿ ನೇಮಿಸಬೇಕೆಂದು ಕರುನಾಡ ವಿಜಯ ಸೇನೆ ರಾಮತ್ನಾಳ ಗ್ರಾಮ ಘಟಕದ ಪದಾಧಿಕಾರಿಗಳು ಸಚಿವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ ಮಾಕಾಪೂರು ಪ್ರಾಥಮಿಕ ಆರೋಗ್ಯ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಗಳು ಕೊರತೆಯಿಂದ ಸರಿಯಾಗಿ ಚಿಕಿತ್ಸೆ ಸಿಗದ ಹಿನ್ನಲೆಯಲ್ಲಿ ರೋಗಿಗಳು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದೆ ಸದರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಎಂಬಿಬಿಎಸ್ ವೈದ್ಯರನ್ನು ಮುದಗಲ್ ಸಮುದಾಯದ ಆರೋಗ್ಯ ಕೇಂದ್ರಕ್ಕೆ ನಿಯೋಜನೆ ಮಾಡಲಾಗಿದೆ ಹಾಗೂ ಸ್ಟಾಪ್ ನರ್ಸ ಕೊರತೆಯಿಂದ ಸರಿಯಾದ ಸಮಯಕ್ಕೆ ಬಡರೋಗಿಗಳಿಗೆ ಚಿಕಿತ್ಸೆ ಸಿಗದೆ ಹಿನ್ನಲೆ ಪ್ರಾಥಮಿಕ…
Read More »