ಸವದತ್ತಿ
-
ಶ್ರೀ ರೇಣುಕಾ ಯಲ್ಲಮ್ಮ ಅಭಿವೃದ್ಧಿ 2 ನೇ ಸಭೆ ; ಸತೀಶ್ ಜಾರಕಿಹೊಳಿ ಭಾಗಿ
ಸವದತ್ತಿ; ಯಲ್ಲಮ್ಮನ ಗುಡ್ಡದ ಕಲ್ಯಾಣ ಮಂಟಪದ ಸಭಾ ಭವನದಲ್ಲಿ ಇಂದು ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ “ರಾಜ್ಯ ಮಟ್ಟದ” ಸಮಿತಿಯ 2 ನೇ ಸಭೆಯಲ್ಲಿ ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾಗವಹಿಸಿದ್ದರು ಈ ವೇಳೆ ಶಾಸಕರಾದ ಶ್ರೀ ವಿಶ್ವಾಸ ವೈದ್ಯ, ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಸರ್ವ ಸದಸ್ಯರು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
Read More » -
ಸವದತ್ತಿ ನಗರದಲ್ಲಿ ಇಂದು ಪರಿಶಿಷ್ಟ ಜಾತಿ ಒಳ ಮೀಸಲಾತಿ ಗಣತಿಗೆ ಚಾಲನೆ ನೀಡಲಾಯಿತು.
ಸವದತ್ತಿ: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಒದಗಿಸುವುದಕ್ಕಾಗಿ ಮೇ 5 ರಿಂದ ಪರಿಶಿಷ್ಟ ಜಾತಿ, ಉಪ ಜಾತಿ ಸಮಗ್ರ ಸಮೀಕ್ಷೆ–2025 ನಡೆಯಲಿದೆ. ಈ ಸಮೀಕ್ಷೆ ಮೂರು ಹಂತಗಳಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ ಗಣತಿ ನಡೆಯಲಿದೆ. ಈ ಗಣತಿಯ ಮೂಲಕ ಉಪಜಾತಿಗಳು, ಅವುಗಳ ಜನಸಂಖ್ಯೆ, ಆರ್ಥಿಕ ಸ್ಥಿತಿಗತಿ, ಉದ್ಯೋಗ, ಭೂಮಾಲೀಕತ್ವ ಇತ್ಯಾದಿ ಮಾಹಿತಿಗಳನ್ನೂ ಕಲೆಹಾಕಲಾಗುತ್ತದೆ. ಎಲ್ಲ ದತ್ತಾಂಶಗಳನ್ನು ಸಂಗ್ರಹಿಸಿದ ಬಳಿಕ ವಿಶ್ಲೇಷಣೆ ಮಾಡಿ ಪರಿಶಿಷ್ಟ ಜಾತಿ ಮೀಸಲಾತಿಯಲ್ಲಿ ಒಳಮೀಸಲು ಒದಗಿಸುವುದಕ್ಕೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ. ಈ ಸಂಧರ್ಭದಲ್ಲಿ ತಹಸೀಲ್ದಾರ್ ಶ್ರೀ ಮಲ್ಲಿಕಾರ್ಜುನ ಹೆಗ್ಗನ್ನವರ್, ಸಮಾಜ…
Read More » -
ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಜೆಸಿಬಿ ಸದ್ದು. ರಸ್ತೆ ಮೇಲಿನ ಅತಿಕ್ರಮಣ ತೆರವ
ಬೆಳಗಾವಿ : ಸವದತ್ತಿ ಪಟ್ಟಣದ ಅಭಿವೃದ್ಧಿ ಹಿನ್ನೆಲೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿಗಾಗಿ ರಸ್ತೆ ಅತಿಕ್ರಮಿಸಿಕೊಂಡಿದ್ದ ಅಂಗಡಿ ಮುಂಗಟ್ಟುಗಳನ್ನು ಗುರುವಾರ ಬೆಳ್ಳಂ ಬೆಳಿಗ್ಗೆ ತೆರವುಗೊಳಿಸುವ ಕಾರ್ಯಾಚರಣೆ ನಡೆಸಲಾಯಿತು ಬೆಳಗ್ಗೆ 6 ಗಂಟೆಯಿಂದಲೇ ತೆರವು ಕಾರ್ಯಾಚರಣೆ ಆರಂಭವಾಗಿತ್ತು ಪಟ್ಟಣದ ಎಪಿಎಂಸಿ ವೃತ್ತದಿಂದ ಬಸ್ ನಿಲ್ದಾಣದವರೆಗೆ ತೆರವು ಕಾರ್ಯಾಚರಣೆ ನಡೆದಿದೆ 10 ಜೆಸಿಬಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದವು. ನೂರು ಜನ ಪೊಲೀಸ್ ಸಿಬ್ಬಂದಿಗಳು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದರು. ಸವದತ್ತಿ ತಹಶಿಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ,ಸಿಪಿಐ ಧರ್ಮಾಕರ್ ಧರ್ಮಟ್ಟಿ,ಪುರಸಭೆ ಮುಖ್ಯಾಧಿಕಾರಿ ಸಂಗನಬಸಯ್ಯಾ ನೇತೃತ್ವದಲ್ಲಿ ಅತಿಕ್ರಮಣ ತೆರುವು ಕಾರ್ಯಾಚರಣೆ ನಡೆಯಿತು.
Read More » -
ಯಲ್ಲಮ್ಮನ ಸನ್ನಿಧಿಯಲ್ಲಿ ಭಾರತ ಹುಣ್ಣಿಮೆ ಸಂಭ್ರಮ
ಸವದತ್ತಿ: ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಬುಧವಾರ ಸಂಭ್ರಮದಿಂದ ಭಾರತ ಹುಣ್ಣಿಮೆ ಜಾತ್ರೆ ನಡೆಯಿತು. ರಾಜ್ಯ ಹಾಗೂ ಹೊರ ರಾಜ್ಯಗಳ 20 ಲಕ್ಷಕ್ಕೂ ಅಧಿಕ ಭಕ್ತರು ಗುಡ್ಡಕ್ಕೆ ಬಂದು ದೇವಿ ದರ್ಶನ ಪಡೆದರು. ಎಲ್ಲಿ ನೋಡಿದರೂ ಜನಸಾಗರವೇ ಕಣ್ಣಿಗೆ ರಾಚುತ್ತಿತ್ತು. ಉಧೋ ಉಧೋ ಯಲ್ಲಮ್ಮ ನಿನ್ಹಾಲ್ಕ ಉಧೋ ಎಂಬ ಜೈಕಾರ ಮುಗಿಲು ಮುಟ್ಟಿತ್ತು. ಇಡೀ ಗುಡ್ಡದ ಪರಿಸರ ಭಂಡಾರದ ಓಕುಳಿಯಲ್ಲಿ ಮಿಂದೆದ್ದಿತು. ಶ್ರೀ ಕ್ಷೇತ್ರ ರೇಣುಕಾ ಯಲ್ಲಮ್ಮ ದೇವಿಯ ಜಾತ್ರೆಗೆ ಭರತ ಹುಣ್ಣಿಮೆ ನಿಮಿತ್ಯ ದೇವಿ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಪ್ರಾಧಿಕಾರದ ವತಿಯಂದ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗಿದೆ.…
Read More » -
ಯಲ್ಲಮ್ಮ ದೇವಿ ದೇವಸ್ಥಾನ ಬಂದ್ ; ಸಾಮಾಜಿಕ ಜಾಲತಾಣದ ಸುಳ್ಳು ಸುದ್ದಿ.
ಉಗರಗೋಳ: ‘ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡದಲ್ಲಿರುವ ಯಲ್ಲಮ್ಮ ದೇವಿ ದೇವಸ್ಥಾನ ಬಂದ್ ಆಗಿಲ್ಲ. ಭಕ್ತರು ಯಾವುದೇ ವದಂತಿಗೆ ಕಿವಿಗೊಡಬಾರದು ಎಂದು ಯಲ್ಲಮ್ಮ ದೇವಿ ದೇವಸ್ಥಾನ ಪ್ರಾಧಿಕಾರದ ಕಾರ್ಯದರ್ಶಿ ಅಶೋಕ ದುಡಗುಂಟಿ ಹೇಳಿದ್ದಾರೆ. ಅಭಿವೃದ್ಧಿ ಕಾಮಗಾರಿ ಕೈಗೊಳ್ಳುತ್ತಿರುವ ಯಲ್ಲಮ್ಮ ದೇವಸ್ಥಾನವನ್ನು ಎರಡ್ಮೂರು ವರ್ಷದ ಅವಧಿಗೆ ಬಂದ್ ಮಾಡಲಾಗಿದೆ. ದೇವಿ ದರ್ಶನಕ್ಕೆ ಅವಕಾಶವಿಲ್ಲ ಎಂದು ಹಲವು ಭಕ್ತರು ವಿಚಾರಿಸುತ್ತಿದ್ದಾರೆ. ಅದು ಶುದ್ಧಸುಳ್ಳು ಎಂದು ಪ್ರತಿಕ್ರಿಯಿಸಿದ್ದಾರೆ. ಯಲ್ಲಮ್ಮ ದೇವಸ್ಥಾನದಲ್ಲಿ ಎಂದಿನಂತೆ, ದೇವಿಗೆ ವಿಶೇಷ ಪೂಜೆ ನೆರವೇರುತ್ತಿದೆ. ಬೆಳಿಗ್ಗೆಯಿಂದ ರಾತ್ರಿಯವರೆಗೂ ದರ್ಶನಕ್ಕೆ ಅವಕಾಶವಿದೆ. ಹಾಗಾಗಿ ಭಕ್ತರು ವದಂತಿಗೆ ಕಿವಿಗೊಡದೆ ಗುಡ್ಡಕ್ಕೆ ಭೇಟಿ…
Read More » -
ಸವದತ್ತಿ ಯಲ್ಲಮ್ಮ ದೇವಸ್ಥಾನ ಆವರಣದಲ್ಲಿ ಸ್ವಚ್ಛತೆ ಬಗ್ಗೆ ನಿರ್ಲಕ್ಷ್ಯ. ಶಾಸಕ ವಿಶ್ವಾಸ ವೈದ್ಯ ರಿಂದ ಅಧಿಕಾರಿಗಳ ತರಾಟೆ.
ಯಲ್ಲಮ್ಮ ದೇವಸ್ಥಾನ ಆವರಣದಲ್ಲಿ ಸ್ವಚ್ಚತೆ ನಿರ್ಲಕ್ಷ್ಯ: ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಶಾಸಕ. ಸವದತ್ತಿ ಯಲ್ಲಮ್ಮ ದೇವಸ್ಥಾನ ಆವರಣದಲ್ಲಿ ಸ್ವಚ್ಛತೆ ಬಗ್ಗೆ ನಿರ್ಲಕ್ಷ್ಯ. ಸವದತ್ತಿ ಶಾಸಕ ವಿಶ್ವಾಸ ವೈದ್ಯ ಅವರಿಂದ ಅಧಿಕಾರಿಗಳ ತರಾಟೆ. ಯಲ್ಲಮ್ಮನ ದೇವಸ್ಥಾನಕ್ಕೆ ಸರ್ಪೈಸ್ ವಿಸೀಟ್ ಕೊಟ್ಟು ಅಧಿಕಾರಿಗಳ ಚಳಿ ಬಿಡಿಸಿದ ಶಾಸಕ. ಅಸ್ವಚ್ಛತೆ ಕಂಡು ಸ್ಥಳಕ್ಕೆ ಅಧಿಕಾರಿಗಳನ್ನು ಕರೆಯಿಸಿ ತರಾಟೆ ತೆಗೆದುಕೊಂಡ ಶಾಸಕ. ಯಲ್ಲಮ್ಮ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳು ತರಾಟೆಗೆ. ವರ್ಷವಿಡೀ ನಡೆಯುವ ಯಲ್ಲಮ್ಮನ ದೇವಿ ಜಾತ್ರೆ. ವಿವಿಧ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳ ಆಗಮನ ಹಿನ್ನಲೆ. ಅಸ್ವಚ್ಛತೆಯಿಂದ ಕೂಡಿದ ದೇವಸ್ಥಾನದಿಂದ…
Read More »