ಹಾಸನ

  • ರಾಶಿ ಹಾವುಗಳನ್ನು ಕೊಂದು ಹಾಕಿ ಕಾನೂನು ಉಲಂಘನೆ.

    ಹಾಸನ: ಜಿಲ್ಲೆಯ ಹೊಳೆನರಸೀಪುರದಲ್ಲಿ ಹಾವುಗಳ ಕಳೇಬರಗಳು ಸಿಕ್ಕಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಹೊಳೆನರಸೀಪುರ ಪಟ್ಟಣದ ಬಿ.ಎಚ್ ರಸ್ತೆಗೆ ಹೊಂದಿಕೊಂಡಿರುವ ಹಾಸನ – ಮೈಸೂರು ಹೆದ್ದಾರಿಯ ದರ್ಜಿ ಬೀದಿ ಒಳ ಚರಂಡಿಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಹಾವುಗಳ ಕಳೇಬರಗಳು ಪತ್ತೆಯಾಗಿವೆ. ಹತ್ತಾರು ಹಾವುಗಳನ್ನು ಕೊಂದು ಅವುಗಳ ಚರ್ಮ ಹಾಗೂ ದೇಹದೊಳಗಿನ ನಿರುಪಯುಕ್ತ ವಸ್ತುಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿ ರಾತ್ರಿ ಚರಂಡಿಯಲ್ಲಿ ಎಸೆದು ಹೋಗಿದ್ದಾರೆ. ಗುರುವಾರ ಬೆಳಗ್ಗೆ ಎಂದಿನಂತೆ ಪುರಸಭೆಯ ತ್ಯಾಜ್ಯ ನಿರ್ವಹಣೆ ಮಾಡುವ ಸಿಬ್ಬಂದಿ ತ್ಯಾಜ್ಯವನ್ನು ಚರಂಡಿಯಿಂದ ಹೊರತೆಗೆಯುವ ವೇಳೆ ರಕ್ತಸಿಕ್ತ ಪ್ಲಾಸ್ಟಿಕ್ ಚೀಲ ಕಂಡು ಗಾಬರಿಯಾಗಿದ್ದಾರೆ.…

    Read More »
  • ಮಾಜಿ ಪ್ರಿಯಕರನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಮನುಕುಮಾರ್ ಪೊಲೀಸರ ವಶಕ್ಕೆ.

    ಹಾಸನ : ಮಾಜಿ ಪ್ರಿಯಕರನಿಗೆ ಚಾಕು ಇರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದ್ಯ ಮನುಕುಮಾರ್ ಪ್ರಿಯತಮನನ್ನುಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ತಿಳಿಸಿದರು. ಈ ಕುರಿತು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮನುಕುಮಾರ್ ಮತ್ತು ಭವಾನಿ ಇಬ್ಬರೂ ಎ. ಗುಡುಗನಹಳ್ಳಿ ಗ್ರಾಮದ ಒಂದೇ ಊರಿನ ಅಕ್ಕಪಕ್ಕದ ಮನೆಯವರು. ಕಳೆದ 8 ವರ್ಷಗಳಿಂದಲೂ ಇಬ್ಬರಲ್ಲೂ ಪ್ರೀತಿ ಬೆಳೆದಿತ್ತು. ಇವರಿಬ್ಬರು 8 ವರ್ಷದಿಂದ ಪರಸ್ಪರ ಪ್ರೀತಿ ಮಾಡುತ್ತಿದ್ದು, ಕೆಲ ದಿನಗಳ ಹಿಂದೆ ಪ್ರೀತಿ ನಿರಾಕರಿಸಿರುವುದು ಈ ಘಟನೆಗೆ ಕಾರಣವಾಗಿದೆ ಎಂದು ತಿಳಿದು ಬಂದಿದೆ. ಘಟನೆಯಲ್ಲಿ…

    Read More »
  • ಭತ್ತದ ಬೆಳೆಗಳನ್ನ ನಾಶಪಡಿಸಿದ ಕಾಡಾನೆಗಳ ಹಿಂಡು; ಕಂಗಾಲಾದ ರೈತರು

    ಹಾಸನ (ಬೇಲೂರು): ಕಟಾವಿಗೆ ಬಂದಿರುವ ಭತ್ತದ ಬೆಳೆಗಳನ್ನ ಕಾಡಾನೆಗಳ ಹಿಂಡು ತುಳಿದು ನಾಶಪಡಿಸಿರುವ ಘಟನೆ ಬೇಲೂರು ತಾಲೂಕು ಅರೇಹಳ್ಳಿ ಹೋಬಳಿ ಮಲಸಾವರ ಹಾಗೂ ಅನುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಶನಿವಾರ ರಾತ್ರಿ ನಡೆದಿದೆ. 22 ಕಾಡಾನೆಗಳು ಚಿಕ್ಕ ಸಾಲಾವರ (ಬಾವಿಕಟ್ಟೆ) ಗ್ರಾಮದ ಹರೀಶ್, ಶಾಂತಪ್ಪ, ಅಶೋಕ, ಉಪೇಂದ್ರ ಅವರಿಗೆ ಸೇರಿದ ಭತ್ತದ ಪೈರನ್ನು ನಾಶಪಡಿಸಿ ಮಂಜುನಾಥ್ ಎಂಬುವರಿಗೆ ಸೇರಿದ ತೆಂಗಿನ ಮರಗಳನ್ನು ಮುರಿದಿವೆ. ಬಾವಿಕಟ್ಟೆ ಗ್ರಾಮದ ಸುಶೀಲಮ್ಮ ಎಂಬ ರೈತ ಮಹಿಳೆ ಕಟಾವು ಮಾಡಿ ಒಕ್ಕುವ ಸಲುವಾಗಿ ರಾಶಿ ಹಾಕಿದ್ದ ಭತ್ತವನ್ನು ತುಳಿದು ಹಾಳುಮಾಡಿವೆ.

    Read More »
  • ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

    ಬೆಂಗಳೂರು : ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಅತ್ಯಾಚಾರ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದೆ. ಅಲ್ಲದೆ ಎರಡು ಅತ್ಯಾಚಾರ ಪ್ರಕರಣ ಸೇರಿದಂತೆ ಒಟ್ಟು ಮೂರು ಜಾಮೀನು ಅರ್ಜಿಯನ್ನು ಕೂಡ ವಜಾಗೊಳಿಸಿ ಹೈ ಕೋರ್ಟ್ ನ ನ್ಯಾ.ಎಂ.ನಾಗಪ್ರಸನ್ನ ಅವರ ಏಕ ಸದಸ್ಯ ಪೀಠ ಆದೇಶ ಹೊರಡಿಸಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮೂರು ಅತ್ಯಾಚಾರ ಮತ್ತು…

    Read More »
Back to top button