ಬೆಳಗಾವಿ
ರೈಲಿನಲ್ಲಿ ಸೀಟಿಗಾಗಿ ಪರಸ್ಪರ ಹೊಡೆದಾಡಿಕೊಂಡ ಪ್ರಯಾಣಿಕರು

ಬೆಳಗಾವಿ: ರೈಲಿನಲ್ಲಿ ಪ್ರಯಾಣಿಕರು ಸೀಟಿಗಾಗಿ ಪರಸ್ಪರ ಹೊಡೆದಾಡಿಕೊಂಡ ಘಟನೆ ಬೆಳಗಾವಿ ರೈಲ್ವೆ ನಿಲ್ದಾಣದ ರೈಲಿನಲ್ಲಿ ನಡೆದಿದೆ.
ಬೆಳಗಾವಿಯಿಂದ ಕೆಎಸ್‌ಆರ್ ಬೆಂಗಳೂರಿಗೆ ಹೊರಟಿದ್ದ ಸೂಪರ್ ಫಾಸ್ಟ್ ರೈಲಿನಲ್ಲಿ ಸೀಟಿಗಾಗಿ ಇಬ್ಬರು ಪ್ರಯಾಣಿಕರ ನಡುವೆ ವಾಗ್ವಾದ ನಡೆದು ನಂತರ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತು.
ಅವಾಚ್ಯ ಶಬ್ದಗಳಿಂದ ನಿಂದನೆ ಮೂಲಕ ಇಬ್ಬರೂ ಹೊಡೆದಾಡಿಕೊಂಡರು. ಪ್ರಯಾಣಿಕರು ಬಡಿದಾಡಿಕೊಳ್ಳುವ ಮತ್ತೊಬ್ಬ ಪ್ರಯಾಣಿಕ ಮೊಬೈಲ್ ನಲ್ಲಿ ಇದನ್ನು ಸೆರೆ ಹಿಡಿದಿದ್ದಾರೆ.
ರೈಲ್ವೆ ಪೋಲಿಸರು ಬಂದು ಇಬ್ಬರನ್ನು ತರಾಟೆ ತೆಗೆದುಕೊಂಡ ನಂತರ ಜಗಳ ಮುಗಿದಿದೆ.