
ಇಂದು ಸಚಿವ ಶಿವಾನಂದ ಪಾಟೀಲ್ ಅವರು ನೀಡಿದ ರಾಜೀನಾಮೆ ಪತ್ರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯುಟಿ ಖಾದರ್ ಅವರು, ಶಿವಾನಂದ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಅವರಿಗೆ ಇನ್ನೊಬ್ಬರು ಶಾಸಕರು ವೈಯಕ್ತಿಕ ಸವಾಲು ಹಾಕಿದ್ದಾರೆ. ಸವಾಲು ಸ್ವೀಕಾರ ಮಾಡಿ ರಾಜೀನಾಮೆ ನೀಡಿದ್ದಾರೆ ಎಂದರು.
ಪಾಟೀಲ್ ಅವರು ಷರತ್ತುಬದ್ಧ ರಾಜೀನಾಮೆ ನೀಡಿದ್ದಾರೆ. ಇನ್ನೊಬ್ಬ ಶಾಸಕರ ರಾಜೀನಾಮೆ ಅಂಗೀಕರಿಸಿದ ನಂತರ ನನ್ನ ರಾಜೀನಾಮೆ ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ. ಆದರೆ ಯತ್ನಾಳ್ ಅವರು ಇನ್ನೂ ರಾಜೀನಾಮೆ ನೀಡಿಲ್ಲ. ; ಎಂದು ಸ್ಪೀಕರ್ ಸ್ಪಷ್ಟಪಡಿಸಿದರು.
ವೈಯಕ್ತಿಕ ವಿಚಾರಗಳನ್ನು ರಾಜಕಾರಣದಲ್ಲಿ ಬಳಸಬೇಕೋ ಇಲ್ಲವೊ ಅನ್ನೋದು ಅವರವರ ವಿವೇಚನೆ ಬಿಟ್ಟಿರುವ ವಿಚಾರ. ಎಲ್ಲವೂ ಬದಲಾಗುತ್ತಿರುವ ಹಾಗೆ ರಾಜಕಾರಣವೂ ಬದಲಾಗುತ್ತಿದೆ, ಪಾಟೀಲ್ ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಪರಿಶೀಲನೆ ಮಾಡುತ್ತೇನೆ ಎಂದು ಖಾದರ್ ಹೇಳಿದರು.