
ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವ ಮತ್ತು ಶ್ರೀ ವೀರಭದ್ರೇಶ್ವರ ರಾಷ್ಟ್ರೀಯ ಪ್ರಶಸ್ತಿ – 2024 ನವದೆಹಲಿಯಲ್ಲಿ ಕಾರ್ಯಕ್ರಮ ಆಯೋಜನೆ
ಡಿಸೆಂಬರ್ 12-12-2024 ರಂದು ನವದೆಹಲಿಯ ಭಾರತ ಮಂಟಪಮ್ ಸಭಾಂಗಣದಲ್ಲಿ ಶ್ರೀ ವೀರಭದ್ರೇಶ್ವರ ಜಯಂತ್ಯೋತ್ಸವ ಮತ್ತು ಶ್ರೀ ವೀರಭದ್ರೇಶ್ವರ ರಾಷ್ಟ್ರೀಯ ಪ್ರಶಸ್ತಿ – 2024 ಕಾರ್ಯಕ್ರಮ ಜರುಗಿತು.
ಈ ವರ್ಷದ ಶ್ರೀ ವೀರಭದ್ರೇಶ್ವರ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಸಚಿವರಾದ ಶ್ರೀ ವಿ. ಸೋಮಣ್ಣರವರಿಗೆ ನೀಡಿ ಗೌರವಿಸಲಾಯಿತು
ಮೂರು ಸಾವಿರ ಮಠದ ಶ್ರೀಮನ್ ನಿರಂಜನ ಗುರುಸಿದ್ದ ರಾಜಯೋಗಿಂದ್ರ ಮಹಾಸ್ವಾಮಿಗಳವರ ದಿವ್ಯ ಸಾನಿದ್ಯದಲ್ಲಿ ನಡೆದ ಈ ಸಮಾರಂಭದಲ್ಲಿ ಮ.ನಿ.ಪ್ರ ಶ್ರೀ ಜಯಶಾಂತಲಿಂಗ ಸ್ವಾಮಿಗಳು, ಶ್ರೀ ಮುರುಘ ರಾಜೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀ ಕಲ್ಯಾಣ ಸ್ವಾಮಿಗಳವರು ಹಾಗೂ 45 ಕ್ಕಿಂತ ಹೆಚ್ಚು ಮಠಾಧೀಶರ ನೇತೃತ್ವದಲ್ಲಿ ಮತ್ತು ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ ಜೋಶಿಯವರು, ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಶ್ರೀ ಜಗದೀಶ ಶೆಟ್ಟರ್ ಅವರು, ಸಂಸದರಾದ ಶ್ರೀ ಗೋವಿಂದ ಕಾರಜೋಳ ಅವರು, ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರು, ಶ್ರೀ ಬಿ.ವೈ. ರಾಘವೇಂದ್ರ ಅವರು ಹಾಗೂ ವೀರಶೈವ ಲಿಂಗಾಯತ ಸಂಘಟನೆ ವೇದಿಕೆ ರಾಷ್ಟ್ರೀಯ ಅದ್ಯಕ್ಷರಾದ ಶ್ರೀ ಪ್ರದೀಪ್ ಕಂಕಣವಾಡಿ ಅವರು ಉಪಸ್ಥಿತರಿದ್ದರು.
ನವದೆಹಲಿಯಲ್ಲಿ ಅತಿ ಹೆಚ್ಚು ಮಠಾಧೀಶರ ನೇತೃತ್ವದಲ್ಲಿ ನಡೆದ ಮೊದಲ ಕಾರ್ಯಕ್ರಮ ಅನ್ನಿಸಿಕೊಂಡಿದ್ದು ಇನ್ನೊಂದು ವಿಶೇಷ