ಬೆಂಗಳೂರು

ಕೆಎಸ್ಆರ್​​ಟಿಸಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ; ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಕೆಎಸ್ಆರ್​​ಟಿಸಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ಮೂಲಕ ಸಾರಿಗೆ ನೌಕರರ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ.

ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಸಿಎಂ, ಈ ಯೋಜನೆಯಡಿ ಒಡಬಂಡಿಕೆ ಮಾಡಿಕೊಂಡಿರುವ ಎಲ್ಲ ಆಸ್ಪತ್ರೆಗಳು ಕೆಎಸ್​​ಆರ್​ಟಿಸಿ ನೌಕರರು ಮತ್ತು ಕುಟುಂಬದವರು ಆಸ್ಪತ್ರೆಗೆ ಬಂದಾಗ ಅವರನ್ನು ಗೌರವಯುತವಾಗಿ ಹಾಗೂ ಮಾನವೀಯತೆಯಿಂದ ಚಿಕಿತ್ಸೆ ನೀಡಬೇಕು ಎಂದು ತಿಳಿಸಿದರು.

“ಕೆಎಸ್ಆರ್​ಟಿಸಿ ಆರೋಗ್ಯ” ಯೋಜನೆಯಡಿ ಸಾರಿಗೆ ಸಂಸ್ಥೆಯ ಎಲ್ಲ ನೌಕರರು, ಅವರ ತಂದೆ – ತಾಯಿ ಮತ್ತು ಪತ್ನಿ – ಮಕ್ಕಳಿಗೆ ಖರ್ಚಿನ ಮಿತಿಯಿಲ್ಲದ ವೈದ್ಯಕೀಯ ಚಿಕಿತ್ಸೆ ಸೌಲಭ್ಯ ಸಿಗಲಿದೆ. ಈ ಯೋಜನೆ ಅನುಷ್ಠಾನಕ್ಕಾಗಿ ರಾಜ್ಯಾದ್ಯಂತ ಇರುವ ಸರ್ಕಾರಿ ಆಸ್ಪತ್ರೆಗಳು ಸೇರಿದಂತೆ ಒಟ್ಟು 250 ಖಾಸಗಿ ಆಸ್ಪತ್ರೆಗಳೊಂದಿಗೆ ಒಡಬಂಡಿಕೆ ಮಾಡಿಕೊಳ್ಳಲಾಗಿದೆ. ಇದೇ ವೇಳೆ, ಕೆಎಸ್​​ಆರ್​ಟಿಸಿ ನೌಕರರು ಅಪಘಾತದಲ್ಲಿ ಮೃತಪಟ್ಟ ಸಂದರ್ಭದಲ್ಲಿ ಅವರ ಕುಟುಂಬಕ್ಕೆ ನೀಡಲಾಗುವ 1 ಕೋಟಿ ರೂ ಹಾಗೂ ಸೇವೆಯಲ್ಲಿರುವ ಮೃತಪಟ್ಟ ನೌಕರರ ಕುಟುಂಬಕ್ಕೆ ನೀಡಲಾಗುವ 10 ಲಕ್ಷ ರೂ ಪರಿಹಾರದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದರು.

Related Articles

Leave a Reply

Your email address will not be published. Required fields are marked *

Back to top button