Uncategorized

ಖಾನಾಪುರದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯು ಚುರುಕಿನಿಂದ

ಖಾನಾಪುರದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯು ಚುರುಕಿನಿಂದ ಸಾಗಿದ್ದು, ಪ್ರಮುಖ ನಾಯಕರು ತಮ್ಮ ಮತದಾರರ ಗುರುತಿನ ಚೀಟಿ ನವೀಕರಣದಲ್ಲಿ ಭಾಗಿಯಾಗುತ್ತಿದ್ದಾರೆ. ಇದರ ಭಾಗವಾಗಿ ಮಾಜಿ ಶಾಸಕರು ಹಾಗೂ ಎಐಸಿಸಿ ಕಾರ್ಯದರ್ಶಿಯಾದ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ತಮ್ಮ ನಿವಾಸದಲ್ಲಿ ಬಿಎಲ್‌ಒಗಳಿಗೆ ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ.
ಖಾನಾಪುರ: ತಾಲೂಕಿನ ರಾಯಗಡದಲ್ಲಿರುವ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರ ನಿವಾಸಕ್ಕೆ ಸರ್ಕಾರದ ನಿಯಮಾವಳಿಗಳಂತೆ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಗಾಗಿ ಆಗಮಿಸಿದ್ದ ಬಿಎಲ್‌ಒ (BLO) ತಂಡಕ್ಕೆ ಅವರು ಅಗತ್ಯ ದಾಖಲೆಗಳನ್ನು ಹಸ್ತಾಂತರಿಸಿದರು. ತಮ್ಮ ಮತದಾರರ ಮಾಹಿತಿಯನ್ನು ನಿಖರವಾಗಿ ಭರ್ತಿ ಮಾಡಿ, ನೋಂದಣಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಅವರು, ಪ್ರಜಾಪ್ರಭುತ್ವದ ಪ್ರಮುಖ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳುವಂತೆ ಮಾದರಿಯಾದರು. ಈ ಸಂದರ್ಭದಲ್ಲಿ ಸರ್ಕಾರದ ವತಿಯಿಂದ ನಿಯೋಜನೆಗೊಂಡಿದ್ದ ಬಿಎಲ್‌ಒ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button