
ಬೆಂಗಳೂರು, – ಇಲಾಖೆಗಳಲ್ಲಿ ಆಗುತ್ತಿರುವ ತಾರತಮ್ಯ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ಪಿಡಿಓಗಳು ಹಾಗೂ ಕಾರ್ಯದರ್ಶಿಗಳು ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ.
ನಗರದ ಫ್ರೀಡಂಫಾರ್ಕ್‌ನಲ್ಲಿ ರಾಜ್ಯದ ನಾನಾಕಡೆಯಿಂದ ಬಂದಿರುವ ಸಾವಿರಾರು ಮಂದಿ ಸರ್ಕಾರದ ಧೋರಣೆಯನ್ನು ಕಟುವಾಗಿ ಟೀಕಿಸಿದ್ದು, ನಮ ಭಾವನೆಗಳಿಗೆ ಮತ್ತು ಬೇಡಿಕೆಗಳಿಗೆ ಸ್ಪಂದಿಸದ ಹೊರತು ಹೋರಾಟ ನಿಲ್ಲುವುದಿಲ್ಲ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಬಹುದಿನದ ಬೇಡಿಕೆಯಾದ ಖಾಲಿ ಹುದ್ದೆಗಳ ಭರ್ತಿ, ಪಿಡಿಒ ಹುದ್ದೆಗಳನ್ನು ಬಿ ಗ್ರೂಪ್‌ಗೆ ಸೇರ್ಪಡೆಗೊಳಿಸುವುದೂ ಸೇರಿದಂತೆ ಉಚಿತ ಬಸ್, ಆರೋಗ್ಯ ವಿಮೆ, ಇಎಸ್‌ಐ, ಪಿಎಫ್ ಸೇರಿದಂತೆ ಗ್ರಾಪಂ ಸಿಬ್ಬಂದಿಗಳಿಗೆ ಕಂದಾಯ ಇಲಾಖೆ ವತಿಯಿಂದಲೇ ವೇತನವನ್ನು ನೀಡಬೇಕೆಂದು ನಾವು ಕೇಳುತ್ತಿದ್ದರೂ ಬಲವಂತವಾಗಿ ಕೆಲ ನಿಯಮಗಳನ್ನು ಹೇರಲಾಗುತ್ತಿದೆ ಎಂದು ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜು ಆರೋಪಿಸಿದ್ದಾರೆ.
ನಮ ಈ ಹೋರಾಟಕ್ಕೆ ಕಾರ್ಯದರ್ಶಿಗಳು ಲೆಕ್ಕ ಸಹಾಯಕರು, ಕರವಸೂಲಿ ಸಿಬ್ಬಂದಿ, ಕಂಪ್ಯೂಟರ್ ಡೇಟಾ ಆಪರೇಟರ್‌ಗಳು ಬೆಂಬಲ ಸೂಚಿಸಿ ಹೋರಾಟಕ್ಕೆ ಬಂದಿದ್ದಾರೆ. ಕಳೆದ ವಾರವೇ ನಾವು ಅನಿರ್ದಿಷ್ಟ ಹೋರಾಟದ ಬಗ್ಗೆ ಸರ್ಕಾರದ ಗಮನಕ್ಕೆ ತಂದರೂ ನಮಗೆ ಯಾವುದೇ ಭರವಸೆ ಸಿಕ್ಕಿಲ್ಲ ಎಂದು ಟೀಕಿಸಿದ್ದಾರೆ.