ನಮ್ಮ ಸರ್ಕಾರ ಬೀಳಿಸಲು ಬಿಜೆಪಿಯವರು ಕಾಂಗ್ರೆಸ್‌ನ ಶಾಸಕರಿಗೆ 50 ಕೋಟಿ ರೂಪಾಯಿ ಆಮಿಷ ಒಡ್ಡುತ್ತಿದ್ದಾರೆ:ಸಿದ್ದರಾಮಯ್ಯ

ಮೈಸೂರು: ನಮ್ಮ ಸರ್ಕಾರ ಬೀಳಿಸಲು ಬಿಜೆಪಿಯವರು ಕಾಂಗ್ರೆಸ್‌ನ ಶಾಸಕರಿಗೆ 50 ಕೋಟಿ ರೂಪಾಯಿ ಆಮಿಷ ಒಡ್ಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಆರೋಪಿಸಿದ್ದಾರೆ.
ಮೈಸೂರು ಜಿಲ್ಲೆ ತಿ. ನರಸೀಪುರ ತಾಲ್ಲೂಕಿನಲ್ಲಿ 470 ಕೋಟಿ ಮೌಲ್ಯದ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದ ಸಿಎಂ (CM Siddaramaiah) ಈ ಬಾರಿ ಹೇಗಾದರೂ ಸಿದ್ಧರಾಮಯ್ಯ ಸರಕಾರವನ್ನು ಕಿತ್ತುಹಾಕಬೇಕು ಎಂದು ಬಿಜೆಪಿಯವರು ಕಾಂಗ್ರೆಸ್‌ನ 50 ಶಾಸಕರಿಗೆ ತಲಾ 50 ಕೋಟಿ ರೂ.
ಆಫರ್ ನೀಡಿದ್ದರು. ಆದರೆ, ಅದಾಗಲಿಲ್ಲ ಎಂದು ನನ್ನ ಮೇಲೆ ಆರೋಪ ಹೊರಿಸಿ ಕಪ್ಪು ಮಸಿ ಬಳಿಯಲು ಯತ್ನಿಸುತ್ತಿದ್ದಾರೆ.
ಬಿಜೆಪಿ ಎಂದೂ ಸ್ವಂತ ಬಲದ ಮೇಲೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿಲ್ಲ, ಸಾಕಷ್ಟು ಭ್ರಷ್ಟಾಚಾರ ಮಾಡಿ ಲಂಚದಿಂದ ಕೋಟಿಗಟ್ಟಲೆ ಹಣ ಸಂಪಾದನೆ ಮಾಡಿದ್ದಾರೆ. ಆ ಹಣದಿಂದ ನಮ್ಮ 50 ಶಾಸಕರನ್ನು ಖರೀದಿ ಮಾಡಲು ಯತ್ನಿಸಿದ್ದರು. ಅವರು ಯಾರೂ ಹೋಗಲಿಲ್ಲ. ಹಾಗಾಗಿ ನನ್ನ ಮೇಲೆ ಮುಡಾ ಪ್ರಕರಣ ಎಂದು ಸುಳ್ಳು ಆರೋಪ ಮಾಡಿ ಕಪ್ಪು ಮಸಿ ಬಳಿಯಲು ಯತ್ನಿಸುತ್ತಿದ್ದಾರೆ.