ಬೆಂಗಳೂರುರಾಜ್ಯ

ಕೋವಿಡ್ ಅಕ್ರಮ: ವಿಚಾರಣಾ ಆಯೋಗದ ಅವಧಿ ಒಂದು ತಿಂಗಳು ವಿಸ್ತರಣೆ

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಜನರು ಮೃತಪಟ್ಟ ಘಟನೆ ಸಂಬಂಧ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರ ವಿಚಾರಣಾ ಆಯೋಗದ ವರದಿಯನ್ನು ಆಗಸ್ಟ್ 1ರಿಂದ ಆಗಸ್ಟ್ 31ಕ್ಕೆ ಒಂದು ತಿಂಗಳ ಅವಧಿಗೆ ವಿಸ್ತರಿಸಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದ ಪ್ರಕರಣಕ್ಕೆ ಆದ್ಯತೆ ನೀಡಿ, ಒಂದು ತಿಂಗಳೊಳಗಾಗಿ ವಿಚಾರಣೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕಾಗಿರುವ ಕಾರಣ ಸರ್ಕಾರದಿಂದ ಈ ಆದೇಶ ಹೊರಡಿಸಲಾಗಿದೆ.

ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಇತರೆ ಇಲಾಖೆಗಳು ಹಾಗೂ ಈ ಇಲಾಖೆಗಳ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಸಂಸ್ಥೆಗಳಲ್ಲಿ ಔಷಧಿ, ಉಪಕರಣಗಳು ಹಾಗೂ ಸಾಮಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳು ಹಾಗೂ ಇತ್ಯಾದಿ ವಿಷಯಗಳ ಕುರಿತು 2021ರ ಜುಲೈ-ಆಗಸ್ಟ್​​ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿನ ಗಂಭೀರವಾದ ಆರೋಪಗಳ ಬಗ್ಗೆ ತನಿಖೆಯನ್ನು ನಡೆಸಲು ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕಲ್ ಕುನ್ಹಾ ಅವರ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ನೇಮಿಸಿ 3 ತಿಂಗಳೊಳಗಾಗಿ ವರದಿ ಸಲ್ಲಿಸುವಂತೆ 2023, ಆಗಸ್ಟ್ 25ರಂದು ಸರ್ಕಾರ ಅಧಿಸೂಚನೆ ಹೊರಡಿಸಿತ್ತು

Related Articles

Leave a Reply

Your email address will not be published. Required fields are marked *

Back to top button