ಬೆಂಗಳೂರು
ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ಯಾವುದೂ ಇಲ್ಲ, ಎಲ್ಲವೂ ಸುಳ್ಳು; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ”ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ಯಾವುದೂ ಇಲ್ಲ. ಎಲ್ಲವೂ ಸುಳ್ಳು” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಿಧಾನಸೌಧದಲ್ಲಿ ಡಿನ್ನರ್ ಮೀಟಿಂಗ್ ವಿಚಾರವಾಗಿ ಮಾತನಾಡಿದ ಅವರು, ”ಸಚಿವ ಸಂಪುಟ ವಿಸ್ತರಣೆ, ಸಿಎಂ ಬದಲಾವಣೆ ಬಗ್ಗೆ ಚರ್ಚೆ ನಡೆದಿದೆಯಾ ಎಂಬ ಪ್ರಶ್ನೆಗೆ ಯಾವುದೂ ಇಲ್ಲ. ಎಲ್ಲವೂ ಸುಳ್ಳು, ಅವೆಲ್ಲಾ ಸುಳ್ಳು. ಯಾವ ಬದಲಾವಣೆಯೂ ಇಲ್ಲ. ಯಾವುದೂ ಇಲ್ಲ” ಎಂದು ಸ್ಪಷ್ಟಪಡಿಸಿದರು. ”ಊಟಕ್ಕೆ ಸೇರಿದರೆ ಅದನ್ನೇ ಸಭೆ ನಡೆಸಿದ್ದಾರೆ ಎಂದು ಊಹೆ ಮಾಡಿದರೆ ಏನು ಮಾಡಬೇಕು? ನಾವು ಊಟ ಮಾಡಲು ಸೇರಿದ್ದೇವೆ” ಎಂದು ತಿಳಿಸಿದರು.
ಬಸ್ ದರ ಪರಿಷ್ಕರಣೆ ವಿಚಾರವಾಗಿ ಪ್ರತಿಕ್ರಿಯಿಸಿ, ”ಆರ್.ಅಶೋಕ್ ಸಮಯದಲ್ಲಿ ದರ ಹೆಚ್ಚು ಮಾಡಿದ್ದಾರಲ್ಲ ಅದಕ್ಕೆ ಏನು ಹೇಳಬೇಕು?. ಆ ಬಗ್ಗೆ ರಾಮಲಿಂಗಾ ರೆಡ್ಡಿ ಮಾತನಾಡಿದ್ದಾರೆ” ಎಂದರು.