Uncategorized
ವರುಣನ ಆರ್ಭಟಕ್ಕೆ ಕೊಚ್ಚಿ ಹೋದ ಸೇತುವೆ

ಶಿರಹಟ್ಟಿ(ಗದಗ ಜಿಲ್ಲೆ)ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೇಶ್ವರ ತಾಲೂಕಿನಾದ್ಯOತ ವರುಣ ಆರ್ಭಟಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದ್ದು ಇತ್ತ ನೀರಿನ ರಭಸಕ್ಕೆ ಸೇತುವೆ ಕೊಚ್ಚಿ ಹೋಗಿದೆ.
ಹೌದು….. ತಾಲೂಕಿನ ಮಾಡಳ್ಳಿಯಿಂದ ಗುಂಜಳ ಗ್ರಾಮಕ್ಕೆ ಹೋಗುವ ರಸ್ತೆ ನಡುವಿನ ಸೇತುವೆ ಮಳೆಯ ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಸಂಪರ್ಕ ಕಡಿತಗೊಂಡಿದೆ.
ಸೇತುವೆ ಕೊಚ್ಚಿ ಹೋಗಿದ್ದರಿಂದ ರೈತರು ತಮ್ಮ ಹೊಲಗಳಿಗೆ ಹೋಗಲು ಕಷ್ಟವಾಗಿದ್ದು, ದಿನ ನಿತ್ಯ ಪ್ರಯಾಣ ಮಾಡುವ ಪ್ರಯಾಣಿಕರಿಗೆ ಸಮಸ್ಯೆಯಾಗಿದ್ದು.
ಸಂಬಂಧಪಟ್ಟ ಅಧಿಕಾರಗಳು ಆ ಭಾಗದ ಜನಪ್ರತಿನಿದಿಗಳು ಆದಷ್ಟು ಬೇಗನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸಂಚಾರಕ್ಕೆ ಪರ್ಯಾಯ ರಸ್ತೆ ಕಲ್ಪಿಸಬೇಕೆಂದು ಸ್ಥಳೀಯರು ಮನವಿ ಮಾಡಿದರು.